ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಹುರಾಷ್ಟ್ರೀಯ ಕಂಪೆನಿಗಳನ್ನು ಆಕರ್ಷಿಸಲು ಕಾರ್ಯಪಡೆ: ಜಗದೀಶ್‌ ಶೆಟ್ಟರ್‌

Last Updated 9 ಮೇ 2020, 14:40 IST
ಅಕ್ಷರ ಗಾತ್ರ

ಧಾರವಾಡ: ‘ಕೋವಿಡ್–19 ವಿಶ್ವವ್ಯಾಪಿ ಹರಡುತ್ತಿರುವ ಹಿನ್ನೆಲೆಯಲ್ಲಿ ಬಹುರಾಷ್ಟ್ರೀಯ ಕಂಪನಿಗಳು ಚೀನಾದಿಂದ ಹೊರಬರಲು ಮುಂದಾಗಿದ್ದು, ಇವರನ್ನು ಸೆಳೆಯಲು ರಾಜ್ಯ ಸರ್ಕಾರದಿಂದ ಪ್ರತ್ಯೇಕ ಕಾರ್ಯಪಡೆ ರಚಿಸಲು ಮುಖ್ಯಮಂತ್ರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ’ ಎಂದುಬೃಹತ್, ಮಧ್ಯಮ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಆಟೋಮೊಬೈಲ್ ಸೇರಿದಂತೆ ಹಲವು ಉದ್ಯಮಗಳಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲೇ ಮುಂಚೂಣಿಯಲ್ಲಿದೆ. ಕೊರೊನಾ ವೈರಾಣು ವ್ಯಾಪಿಸುತ್ತಿರುವುದರಿಂದ ಜಪಾನ್, ಅಮೆರಿಕಾ ಸೇರಿದಂತೆ ಅನೇಕ ರಾಷ್ಟ್ರಗಳು ಚೀನಾ ಕುರಿತು ಅಸಮಾಧಾನಗೊಂಡಿವೆ. ಹೀಗಾಗಿ ಅಲ್ಲಿಂದ ಸ್ಥಳಾಂತರಗೊಳ್ಳುವ ಕಂಪನಿಗಳು ಭಾರತದಲ್ಲಿ ಬಂಡವಾಳ ಹೂಡಲು ಉತ್ಸುಕತೆ ತೋರಿಸುತ್ತಿವೆ. ಇದನ್ನು ಸದುಪಯೋಗಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದರು.

‘ರಾಜ್ಯದ ಪ್ರಮುಖ ಉದ್ಯಮಿಗಳಾದ ನಂದನ್ ನಿಲೇಕಣಿ, ಕಿರಣ್ ಮಜೂಂದಾರ್ಹಾಗೂ ವಿವಿಧ ಕೈಗಾರಿಕೋದ್ಯಮಿಗಳನ್ನು ಒಳಗೊಂಡ ವಿಶೇಷ ಕಾರ್ಯಪಡೆ ರಚಿಸುವ ಕುರಿತು ಮುಖ್ಯಮಂತ್ರಿ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಕಾರ್ಯಪಡೆ ಮೂಲಕ ಬಹುರಾಷ್ಟ್ರೀಯ ಕಂಪನಿಗಳನ್ನು ಸೆಳೆಯಲು ಪ್ರಯತ್ನ ನಡೆಸಲಾಗುವುದು’ ಎಂದರು.

‘ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಎದುರಿಸುತ್ತಿರುವ ಹಲವು ಕೈಗಾರಿಕೆಗಳು ಕಾರ್ಮಿಕರಿಗೆ ಏಪ್ರಿಲ್ ತಿಂಗಳ ವೇತನವ ನೀಡಲು ಶೂನ್ಯ ಬಡ್ಡಿದರದಲ್ಲಿ ಸಾಲ ಹಾಗೂ ಒಂದು ವರ್ಷದ ನಂತರ ಸಾಲ ಮರುಪಾವತಿ ಮಾಡಲು ಅವಕಾಶ ನೀಡುವಂತೆಮನವಿ ಮಾಡಿಕೊಂಡಿವೆ. ಈ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ’ ಎಂದು ಜಗದೀಶ ಶೆಟ್ಟರ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT