ಸೋಮವಾರ, ಜನವರಿ 20, 2020
24 °C

ನಟಿ ರಶ್ಮಿಕಾ ಮಂದಣ್ಣ ನಿವಾಸದ ಮೇಲೆ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿರಾಜಪೇಟೆ (ಕೊಡಗು ಜಿಲ್ಲೆ): ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಮಿಂಚುತ್ತಿರುವ ಕೊಡಗಿನ ರಶ್ಮಿಕಾ ಮಂದಣ್ಣ ಅವರಿಗೆ ಬೆಳ್ಳಂಬೆಳಿಗ್ಗೆಯೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. 

ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದ ಹೊರವಲಯದಲ್ಲಿರುವ ರಶ್ಮಿಕಾ ಮಂದಣ್ಣ ಅವರ ಮನೆಯ ಮೇಲೆ ಐಟಿ ಅಧಿಕಾರಿಗಳು ಗುರುವಾರ ಬೆಳಿಗ್ಗೆ 7.30ರ ವೇಳೆಗೆ ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ಮುಂದುವರಿದಿದೆ. 

ರಶ್ಮಿಕಾ ತಂದೆಗೆ ಸೇರಿದ ‘ಸೆರೆನಿಟಿ ಹಾಲ್‌’ ಮೇಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಯಾವ ಕಾರಣಕ್ಕೆ ದಾಳಿಯಾಗಿದೆ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ‘ಕಿರಿಕ್‌ ಪಾರ್ಟಿ’ ಮೂಲಕ ಚಿತ್ರರಂಗ ಪ್ರವೇಶಿಸಿದ್ದ ರಶ್ಮಿಕಾ ಮಂದಣ್ಣ ಅವರು ಬಹುಬೇಡಿಕೆ ನಟಿಯಾಗಿದ್ದಾರೆ. ತೆಲುಗು ಸಿನಿಮಾಗಳಲ್ಲೂ ಅವರಿಗೆ ಸಾಕಷ್ಟು ಅವಕಾಶಗಳು ಬರುತ್ತಿವೆ. ರಶ್ಮಿಕಾ ಅವರ ತಂದೆ ಹಾಗೂ ತಂಗಿ ಮಾತ್ರ ಮನೆಯಲ್ಲಿ ಇದ್ದಾರೆ.

ಮೂರು ಕಾರಿನಲ್ಲಿ ಬಂದಿರುವ ಬೆಂಗಳೂರು ಕಚೇರಿಯ ಐಟಿ ಅಧಿಕಾರಿಗಳು, ರಶ್ಮಿಕಾ ಅವರ ಬ್ಯಾಂಕ್‌ ಹಾಗೂ ಅವರ ಹೆಸರಿನಲ್ಲಿರುವ ಆಸ್ತಿ ವಿವರಗಳ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು