ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

50 ಮೀರಿದ ಶಿಕ್ಷಕಿಯರಿಗೆ ಕಡ್ಡಾಯ ವರ್ಗ ಇಲ್ಲ: ಸಚಿವ

Last Updated 4 ಅಕ್ಟೋಬರ್ 2019, 19:33 IST
ಅಕ್ಷರ ಗಾತ್ರ

ಬೆಂಗಳೂರು:50 ವರ್ಷ ಮೀರಿದ ಶಿಕ್ಷಕಿಯರಿಗೆ ಹಾಗೂ 55 ವರ್ಷ ಮೀರಿದ ಶಿಕ್ಷಕರಿಗೆ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ನೀಡುವ ಚಿಂತನೆ ನಡೆಸಲಾಗುತ್ತಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದರು.

‘ಈ ಬಾರಿಯ ಕಡ್ಡಾಯ ವರ್ಗಾವಣೆಗೊಂಡವರಿಗೆ ಮುಂದಿನ ವರ್ಗಾವಣಾ ಪ್ರಕ್ರಿಯೆಗೆ ಮೊದಲೇ ಲಭ್ಯ ಇರುವ ಖಾಲಿ ಹುದ್ದೆಗಳಿಗೆ ಅನುಸಾರವಾಗಿ ಒಂದು ಬಾರಿ ಕೋರಿಕೆ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಅವರು ಹೇಳಿದರು.

‘ಸಿ’ ವಲಯದಲ್ಲಿ ಯಾರಾದರೂ 15 ವರ್ಷ ಸೇವೆ ಸಲ್ಲಿಸಿದ್ದರೆ ಅವರಿಗೆ ಮತ್ತೆ ‘ಸಿ’ ವಲಯಕ್ಕೆ ವರ್ಗಾವಣೆ ಮಾಡುವುರಿಂದ ವಿನಾಯಿತಿ, ಶೇ 20ರಷ್ಟು ಖಾಲಿ ಹುದ್ದೆ ಇರುವ ಕಡೆಯಿಂದ ಇದುವರೆಗೆ ವರ್ಗಾವಣೆ ಕೊಡುತ್ತಾ ಇರಲಿಲ್ಲ, ಅದನ್ನು ಶೇ 25ಕ್ಕೆ ಹೆಚ್ಚಿಸುವ ಚಿಂತನೆ ಇದೆ’ ಎಂದು ಅವರು ಶನಿವಾರ ಇಲ್ಲಿ ತಿಳಿಸಿದರು.

‘ಶಿಕ್ಷಕಿ ಬುದ್ಧಿಮಾಂದ್ಯ ಮಗುವಿನ ತಾಯಿ ಆಗಿದ್ದರೆ ಆಕೆಗೆ ಹಾಗೂ ವಿಚ್ಛೇದಿತೆಗೆ ಕಡ್ಡಾಯ ವರ್ಗಾವಣೆಯಿಂದ ವಿನಾಯಿತಿ ನೀಡುವ ಚಿಂತನೆಯೂ ಇದೆ. ಪ್ರಾಥಮಿಕ ಶಾಲೆಯ ಶಿಕ್ಷಕರಿಗೆ ತಾಲ್ಲೂಕಿನೊಳಗೆ ಹಾಗೂ ಪ್ರೌಢಶಾಲೆ ಶಿಕ್ಷಕರಿಗೆ ಜಿಲ್ಲೆಯೊಳಗಷ್ಟೇ ವರ್ಗಾವಣೆ ಮಾಡುವ ಪ್ರಸ್ತಾವವೂ ಇದೆ.ಅಧಿಕಾರಿಗಳೊಂದಿಗೆ ಈ ಬಗ್ಗೆ ಚರ್ಚಿಸಿದ್ದು, ಇನ್ನಷ್ಟು ಚರ್ಚೆ ಬಾಕಿ ಇದೆ. ಕಾಯ್ದೆಗೆ ತಿದ್ದುಪಡಿ ತಂದು ಮುಂದಿನ ವರ್ಷ ಇದು ಅನುಷ್ಠಾನಕ್ಕೆ ಬರಲಿದೆ’ ಎಂದರು.

‘ಕಡ್ಡಾಯ ವರ್ಗಾವಣೆ’ಯನ್ನು ಇನ್ನು ‘ವಿಶೇಷ ವರ್ಗಾವಣೆ’ ಎಂಬುದಾಗಿ ಕರೆಯಲಾಗುವುದು. ಶಿಕ್ಷಕ ಸ್ನೇಹಿ ವರ್ಗಾವಣೆ ಕ್ರಮ ಜಾರಿಗೆ ತರುವುದೇ ಸರ್ಕಾರದ ಉದ್ದೇಶ. ಸಾರ್ವಜನಿಕರು, ಶಿಕ್ಷಕರ ಅಭಿಪ್ರಾಯವನ್ನೂ ಆಹ್ವಾನಿಸಲಾಗುತ್ತಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT