ಮಂಗಳವಾರ, ಸೆಪ್ಟೆಂಬರ್ 17, 2019
27 °C

7ರಿಂದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌

Published:
Updated:

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ವರ್ಗಾವಣೆಯ ಪರಿಷ್ಕೃತ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆಗೊಳಿಸಿದ್ದು, ಇದೇ 7ರಿಂದ ಮತ್ತೆ ಕೌನ್ಸೆಲಿಂಗ್‌ ಪ್ರಕ್ರಿಯೆ ಮುಂದುವರಿಯಲಿದೆ.

ಆಗಸ್ಟ್‌ 19ರಂದು ಹೊರಡಿಸಲಾದ ವರ್ಗಾವಣೆ ವೇಳಾಪಟ್ಟಿಯಲ್ಲಿ ಕೆಲವೊಂದು ಪರಿಷ್ಕರಣೆ ಮಾಡಿದ್ದು ಬಿಟ್ಟರೆ ಉಳಿದ ಸೂಚನೆಗಳು ಯಥಾವತ್ತಾಗಿ ಮುಂದುವರಿಯುತ್ತವೆ ಎಂದು ಪ್ರಾಥಮಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ.ಕೆ.ಜಿ.ಜಗದೀಶ್‌ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ.

ಸೆ.7ರಿಂದ 9ರವರೆಗೆ ಕಡ್ಡಾಯ ವರ್ಗಾವಣೆ ಪ್ರಕ್ರಿಯೆಯನ್ನು ಆಯಾ ಜಿಲ್ಲಾ ಉಪ ನಿರ್ದೇಶಕರು ನಿಭಾಯಿಸಬೇಕು. ಸೆ.11ರಿಂದ ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್‌, 16ರಿಂದ 19ರವರೆಗೆ ಪ್ರಾಥಮಿಕ ಶಾಲಾ ಶಿಕ್ಷಕರ ಘಟಕದ ಹೊರಗಿನ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್‌, 20ರಿಂದ 21ರವರೆಗೆ ಘಟಕದ ಹೊರಗಿನ ಕೋರಿಕೆ ವರ್ಗಾವಣೆ (ವಿಶೇಷ ಶಿಕ್ಷಕರು), 23ರಂದು ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್‌ ನಡೆಯಲಿದೆ.

ಹಿಂದಿ ಶಿಕ್ಷಕರಿಗೆ ಆಗುತ್ತಿರುವ ಅನ್ಯಾಯವನ್ನು ಈ ಬಾರಿಯೇ ಸರಿಪಡಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಎಂ.ನಾರಾಯಣಸ್ವಾಮಿ ತಿಳಿಸಿದ್ದಾರೆ.

 

Post Comments (+)