ಮಂಗಳವಾರ, ಸೆಪ್ಟೆಂಬರ್ 17, 2019
21 °C

ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪುನರಾರಂಭ

Published:
Updated:

ಬೆಂಗಳೂರು: ಸ್ಥಗಿತಗೊಂಡಿದ್ದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಶುಕ್ರವಾರ ಮತ್ತೆ ಆರಂಭವಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲೂ ವ್ಯವಸ್ಥಿತವಾಗಿ ವರ್ಗಾವಣೆ ಪ್ರಕ್ರಿಯೆ ನಡೆಯಿತು.

‘ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮೊದಲ ಹಂತದ ವರ್ಗಾವಣೆ ಕೌನ್ಸೆಲಿಂಗ್‌ ಸಹ ಬಾಕಿ ಉಳಿದಿತ್ತು. ಶುಕ್ರವಾರ ಎಲ್ಲೆಡೆ ಕೌನ್ಸೆಲಿಂಗ್‌ ಪುನರಾರಂಭಗೊಂಡಿದೆ. ವೇಳಾಪಟ್ಟಿಯಂತೆ ಎಲ್ಲವೂ ಮುಂದುವರಿಯಲಿದೆ’ ಎಂದುಪ್ರಾಥಮಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಎಂ.ಪಿ.ಮಾದೇಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

ಮುಖ್ಯಮಂತ್ರಿ ಅವರ ಸೂಚನೆ ಮೇರೆಗೆ ಕೌನ್ಸೆಲಿಂಗ್‌ ವಾರದ ಹಿಂದೆ ಸ್ಥಗಿತವಾಗಿತ್ತು.

 

Post Comments (+)