ಬುಧವಾರ, ಸೆಪ್ಟೆಂಬರ್ 23, 2020
20 °C

ಜೂನ್‌ 12ರಿಂದ ಶಿಕ್ಷಕರ ವರ್ಗಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ 2018–19ರಲ್ಲಿ ತಾತ್ಕಾಲಿಕವಾಗಿ ಸ್ಥಗಿತವಾಗಿತ್ತು. ಅದನ್ನು ಜೂನ್‌ 12ರಿಂದ ಮುಂದುವರಿಸಲಾಗುತ್ತಿದೆ.

‘ಕರ್ನಾಟಕ ಸಿವಿಲ್‌ ಸೇವೆಗಳು (ಶಿಕ್ಷಕರ ವರ್ಗಾವಣಾ ನಿಯಂತ್ರಣ) (ತಿದ್ದುಪಡಿ) ಕಾಯ್ದೆ’ಯಂತೆ ಈ ಪ್ರಕ್ರಿಯೆ ನಡೆಯಲಿದ್ದು, 2018–19ರ ವರ್ಗಾವಣೆಗಳಿಗೆ ಆನ್‌ಲೈನ್‌ನಲ್ಲಿ ಸ್ವೀಕರಿಸಲಾಗಿದ್ದ ಶಿಕ್ಷಕರ ಕೋರಿಕೆ ಅರ್ಜಿಗಳನ್ನು ಪರಿಗಣಿಸಲಾಗುವುದು.

ಶಿಕ್ಷಕರು ಇಚ್ಛಿಸಿದಲ್ಲಿ ಅರ್ಜಿಯಲ್ಲಿ ಆದ್ಯತೆ ಇತ್ಯಾದಿ ತಿದ್ದುಪಡಿಗಳನ್ನು ಅಳವಡಿಸಲು ಅವಕಾಶ ನೀಡಲಾಗುವುದು. ವರ್ಗಾವಣೆ ಕೋರಿ ಇತರ ಶಿಕ್ಷಕರಿಗೆ ಅರ್ಜಿ ಸಲ್ಲಿಸಲು ಸಹ ಅವಕಾಶವಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಎಂ.ಟಿ.ರೇಜು ತಿಳಿಸಿದ್ದಾರೆ.

ಶಿಕ್ಷಕರ ಮಾಹಿತಿ ತಂತ್ರಾಂಶ ಟಿಡಿಎಸ್‌ನಲ್ಲಿ ಸೇವಾ ಮತ್ತಿತರ ಅಗತ್ಯ ವಿವರಗಳನ್ನು ಅಳವಡಿಸಿರಬೇಕು. ಈ ಮಾಹಿತಿಗಳನ್ನು ದೃಢಪಡಿಸಲು ಉಪನಿರ್ದೇಶಕರು ಮತ್ತು ಬಿಇಒಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು