ಗುರುವಾರ , ಜನವರಿ 23, 2020
21 °C

ಶಾಲಾರಂಭದ ದಿನವೇ ಅತಿಥಿ ಶಿಕ್ಷಕರ ನೇಮಕಕ್ಕೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಶಿಕ್ಷಕರ ಕೊರತೆ ನೀಗಿಸುವ ಸಲುವಾಗಿ ಜೂನ್‌ 1ನೇ ತಾರೀಖಿನಿಂದಲೇ ಅತಿಥಿ ಶಿಕ್ಷಕರನ್ನು ನೇಮಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್‌ ಹೇಳಿದರು.

‌ಶುಕ್ರವಾರ ಜಿಲ್ಲಾ ಪಂಚಾಯಿತಿ ಸಿಇಒಗಳು ಮತ್ತು ಡಿಡಿಪಿಐಗಳೊಂದಿಗೆ ವಿಡಿಯೊ ಸಂವಾದ ನಡೆಸಿದ ಅವರು, ಶಾಲಾ ಶಿಕ್ಷಕರು ನೇಮ ಕವಾಗುವ ತನಕ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಈಗಾಗಲೇ ಅನುಮತಿ ನೀಡಲಾಗಿದೆ. ವಿದ್ಯಾರ್ಥಿಗಳಿಗೆ ಪಾಠ ತಪ್ಪ ಬಾರದು ಎಂಬ ಕಾರಣಕ್ಕೆ ಜೂನ್‌ 1ರಿಂದಲೇ ಅತಿಥಿ ಶಿಕ್ಷಕರನ್ನು ನೇಮಿಸಿ ಕೊಳ್ಳುವುದಕ್ಕೆ ಅವಕಾಶ ನೀಡಲಾಗಿದೆ ಎಂದರು.

ಎಸ್ಸೆಸ್ಸೆಲ್ಸಿ ಪರೀಕ್ಷಾ ಸುಧಾರಣೆಗೆ ಚಿಕ್ಕಬಳ್ಳಾಪುರ, ರಾಯಚೂರು, ಮಂಡ್ಯ, ಧಾರವಾಡ ಶೈಕ್ಷಣಿಕ ವಲಯ ಮತ್ತು ಬೆಂಗಳೂರು ನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಉತ್ತಮ ಕ್ರಮಗಳನ್ನು ಕೈಗೊಂಡಿದ್ದು ಅವುಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದರು.

ಪರೀಕ್ಷಾ ಸುಧಾರಣೆಗೆ ಶಿಕ್ಷಣ ತಜ್ಞರು, ನಿವೃತ್ತ, ಎನ್‌ಜಿಒ ಮತ್ತು ಖಾಸಗಿ ಸಂಸ್ಥೆಗಳ ಉಪನ್ಯಾಸಕರ ಸೇವೆ ಬಳಸಿಕೊಳ್ಳಬಹುದು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಫಲಿತಾಂಶ ಉತ್ತಮಪಡಿಸಲು ಕೈಗೊಂಡಿರುವ ಕ್ರಮ ಪ್ರಶಂಶಿಸಿದ ಅವರು, ಪೂರ್ವಸಿದ್ಧತಾ ಪರೀಕ್ಷೆ
ಗಳನ್ನು ಮಕ್ಕಳು ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಲ್ಲೇ ಬರೆಯುವ ಮೂಲಕ ಹೊಸ ಪರೀಕ್ಷಾ ಸ್ಥಳ ಎಂಬ ಭಾವನೆ ಮೂಡದಂತೆ ಕೈಗೊಂಡ ಕ್ರಮವನ್ನು ಶ್ಲಾಘಿಸಿದರು.

ಪ್ರತಿಕ್ರಿಯಿಸಿ (+)