ಶಿಕ್ಷಕರ ನೇಮಕಾತಿ ಪರೀಕ್ಷೆ ಅಂಕಗಳು ಪ್ರಕಟ

7

ಶಿಕ್ಷಕರ ನೇಮಕಾತಿ ಪರೀಕ್ಷೆ ಅಂಕಗಳು ಪ್ರಕಟ

Published:
Updated:

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಗಳ ಪದವೀಧರ ಪ್ರಾಥಮಿಕ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕಾತಿ ಪರೀಕ್ಷೆಯ ಅಂಕಗಳ ವಿವರಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ತನ್ನ ವೆಬ್‌ಸೈಟ್‌ನಲ್ಲಿ ಶನಿವಾರ ಪ್ರಕಟಿಸಿದೆ.

www.schooleducation.kar.nic.in ನಲ್ಲಿ ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮದಿನಾಂಕವನ್ನು ನಮೂದಿಸಿ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳನ್ನು ನೋಡಬಹುದು. ಜೊತೆಗೆ ವಿದ್ಯಾರ್ಹತೆಗೆ ನಿಗದಿ ಮಾಡಿರುವ ವಿವರಗಳು, ಮೆರಿಟ್‌ ಅಂಕ, ಹುದ್ದೆವಾರು ಹಾಗೂ ಪ್ರವರ್ಗವಾರು ಕಟ್‌ಆಫ್‌ ಅಂಕಗಳನ್ನು ಪ್ರಕಟಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ನೇಮಕಾತಿಯ ನಾಲ್ಕು ಹಂತದ ಪರೀಕ್ಷೆಗಳ ಪರಿಷ್ಕೃತ ಕೀ ಉತ್ತರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಕೆಲವು ಜಿಲ್ಲೆಗಳಲ್ಲಿನ ತಾತ್ಕಾಲಿಕ ಪರಿಶೀಲನಾ ಪಟ್ಟಿಯಲ್ಲಿ ನಿಗದಿತ ಖಾಲಿ ಹುದ್ದೆಗಳಿಗಿಂತ ಹೆಚ್ಚುವರಿ ಪ್ರಕಟಿಸಿರುವ ಅಭ್ಯರ್ಥಿಗಳ ಪಟ್ಟಿಯನ್ನು ಪರಿಷ್ಕರಿಸಿ ಹೊಸ ಪಟ್ಟಿಯನ್ನು ಪ್ರಕಟಿಸಿದೆ.

ಫಲಿತಾಂಶ  ತಡೆ: ಕೆಲವು ಅಭ್ಯರ್ಥಿಗಳ ಫಲಿತಾಂಶವನ್ನು ಅನಿವಾರ್ಯ ಕಾರಣಗಳಿಂದ ತಡೆಹಿಡಿಯಲಾಗಿದೆ. ಪರಿಶೀಲನಾ ಅವಧಿಯಲ್ಲಿ ಆ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳೊಂದಿಗೆ ಡಿಡಿಪಿಐ ಅವರನ್ನು ಸಂಪರ್ಕಿಸಬೇಕಾಗಿ ಸೂಚನೆಯಲ್ಲಿ ತಿಳಿಸಲಾಗಿದೆ.

ದಾಖಲೆಗಳು ಸಮರ್ಪಕವಾಗಿದ್ದಲ್ಲಿ ಅಂತಿಮ ಅಂಕಗಳನ್ನು ಪರಿಗಣಿಸಿ, ರ್‍ಯಾಂಕ್‌ಪಟ್ಟಿಯಲ್ಲಿ ಅವರ ಅರ್ಹತಾ ಸ್ಥಾನವನ್ನು ನಿಗದಿಗೊಳಿಸಿ ಅಂತಿಮ ರ್‍ಯಾಂಕ್‌ ಪಟ್ಟಿ ಪ್ರಕಟಿಸಲಾಗುವುದು ಎಂದು ಇಲಾಖೆ ಹೇಳಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !