ಭಾನುವಾರ, ಜುಲೈ 25, 2021
22 °C

ಶಿಕ್ಷಕರನ್ನು ಕೊರೊನಾ ವಾರಿಯರ್ಸ್‌ ಎಂದು ಘೋಷಿಸಲು ಸಂಘದ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕೋವಿಡ್ 19 ವಿರುದ್ಧದ ಹೋರಾಟದಲ್ಲಿ ಶಿಕ್ಷಕರು ಸಾಕಷ್ಟು ಕೆಲಸ ಮಾಡಿದ್ದಾರೆ. ಆದ್ದರಿಂದ ಅವರನ್ನೂ ಕೊರೊನಾ ವಾರಿಯರ್ಸ್‌ ಎಂದು ಸರ್ಕಾರ ಘೋಷಿಸಬೇಕು ಎಂದು ರಾಜ್ಯ ಸರ್ಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಅಶೋಕ ಎಂ. ಸಜ್ಜನ ಆಗ್ರಹಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ‘ಶಾಲೆ ಆರಂಭಿಸುವ ಬಗ್ಗೆ ರಾಜ್ಯ ಸರ್ಕಾರ ಯೋಜನೆ ರೂಪಿಸುತ್ತಿದೆ. ಆದರೆ, ಬಹಳಷ್ಟು ಕಡೆ ಶಾಲೆಗಳೇ ಕ್ವಾರಂಟೈನ್‌ ಕೇಂದ್ರಗಳಾಗಿವೆ. ಐದು ವರ್ಷಕ್ಕಿಂತಲೂ ಕಡಿಮೆ ವಯಸ್ಸಿನ ಮಕ್ಕಳನ್ನು ಹೊಂದಿರುವ ಶಿಕ್ಷಕರು ಶಾಲೆಗಳಿಗೆ ಬೇರೆ ಊರುಗಳಿಗೆ ಹೋಗಿ ಬಂದರೆ ಅವರಿಗೆ ಸೋಂಕು ಹರಡುವ ಅಪಾಯವಿರುತ್ತದೆ. ಆದ್ದರಿಂದ ಸದ್ಯಕ್ಕೆ ಶಾಲೆ ಆರಂಭದ ನಿರ್ಧಾರ ಕೈಬಿಡಬೇಕು’ ಎಂದು ಆಗ್ರಹಿಸಿದರು.

ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆ ಮತ್ತು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿರುವ ಶಿಕ್ಷಕರು, ಕೊರೊನಾ ಕಾಲದಲ್ಲಿ ಶಾಲೆಗಳಿಗೆ ಹೋಗಲು ತೊಂದರೆಯಾಗುತ್ತದೆ. ಆದ್ದರಿಂದ ಮಕ್ಕಳಿಗೆ ಹಾಗೂ ಶಿಕ್ಷಕರಿಗೆ ಒಂದೇ ಸಲ ಶಾಲೆಗೆ ಹಾಜರಾಗುವಂತೆ ಆದೇಶ ಹೊರಡಿಸಬೇಕು ಎಂದು ಅವರು ಕೋರಿದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಉಪ್ಪಿನ, ಕೋಶಾಧ್ಯಕ್ಷ ಎಸ್‌.ಎಫ್‌. ಪಾಟೀಲ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು