ಶಿಕ್ಷಕರ ಅರ್ಹತಾ ಪರೀಕ್ಷೆ: 2.39 ಲಕ್ಷ ಅಭ್ಯರ್ಥಿಗಳು ಹಾಜರು

7

ಶಿಕ್ಷಕರ ಅರ್ಹತಾ ಪರೀಕ್ಷೆ: 2.39 ಲಕ್ಷ ಅಭ್ಯರ್ಥಿಗಳು ಹಾಜರು

Published:
Updated:

ಬೆಂಗಳೂರು: ಶಿಕ್ಷಕರಾಗಿ ನೇಮಕಾತಿ ಹೊಂದಲು ಕನಿಷ್ಠ ಅರ್ಹತೆಯಾಗಿ ಪರಿಗಣಿಸಲು ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಭಾನುವಾರ ನಡೆಯಿತು.

ಈ ಬಾರಿಯ ಪರೀಕ್ಷೆ ಕಠಿಣವಾಗಿತ್ತು, ಸಿಲೆಬಸ್‌ನಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಲಾಗಿದೆ ಎಂದು ಕೆಲವು ಅಭ್ಯರ್ಥಿಗಳು ಅಭಿಪ್ರಾಯಪಟ್ಟಿದ್ದಾರೆ.

‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ’ ಈ ಪರೀಕ್ಷೆಯನ್ನು ನಡೆಸಿದ್ದು, ರಾಜ್ಯದ ಎಲ್ಲೆಡೆ ಬಿಗಿ ಭದ್ರತೆಯಲ್ಲಿ ಪರೀಕ್ಷೆ ನಡೆಸಿದೆ. 2,60,073 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಅದರಲ್ಲಿ 2,39,726 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

20,347 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿರಲಿಲ್ಲ. 1 ರಿಂದ 5 ನೇ ತರಗತಿ ಮತ್ತು 6 ರಿಂದ 8 ನೇ ತರಗತಿವರೆಗಿನ ಎರಡು ಹಂತಗಳ ಪರೀಕ್ಷೆ ನಡೆಯಿತು.

Tags: 

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !