ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯದಾದ್ಯಂತ ಪ್ರಾಥಮಿಕ ಶಿಕ್ಷಕರ ಪ್ರತಿಭಟನೆ

ಗುರುವಾರ , ಜೂಲೈ 18, 2019
28 °C

ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯದಾದ್ಯಂತ ಪ್ರಾಥಮಿಕ ಶಿಕ್ಷಕರ ಪ್ರತಿಭಟನೆ

Published:
Updated:

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದಾದ್ಯಂತ ಪ್ರಾಥಮಿಕ ಶಾಲಾ ಶಿಕ್ಷಕರು ಮಂಗಳವಾರ ಪ್ರತಿಭಟನೆ ನಡೆಸಿದರು.

ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹಾಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಬೇಕು ಎಂಬ ಮುಖ್ಯ ಬೇಡಿಕೆ ಸಹಿತ ಇತರ ಆರು ಬೇಡಿಕೆಗಳ ಈಡೇರಿಕೆಗೆ ಸಂಘ ಒತ್ತಾಯಿಸಿದೆ.

ಕರ್ನಾಟಕ ರಾಜ್ಯ ಪ್ರಾಥಮಿಕ ‌ಶಾಲಾ ಶಿಕ್ಷಕರ ಸಂಘ ರಾಜ್ಯವ್ಯಾಪಿ ಮುಷ್ಕರಕ್ಕೆ ಕರೆ ನೀಡಿತ್ತು. ಕಲಬುರ್ಗಿ ನಗರದ ಪ್ರಮುಖ ಬೀದಿಗಳಲ್ಲಿ ಭಾರಿ ಮೆರವಣಿಗೆ ನಡೆಯಿತು. 

ಉತ್ತರ ಕನ್ನಡ: ಶೈಕ್ಷಣಿಕ ಜಿಲ್ಲೆಯ ನೂರಾರು ಶಿಕ್ಷಕರು ಮಂಗಳವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಮಾಡಿದರು. ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಶಿಕ್ಷಕರು, ಸುಭಾಸ್ ವೃತ್ತ, ಸವಿತಾ ವೃತ್ತ, ಪಿಕಳೆ ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಬಂದರು. ಬಳಿಕ ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿ ಯೋಗೇಶ್ವರ್ ಮೂಲಕ ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಿದರು.

ಬೆಳಗಾವಿ: ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಯಲ್ಲಿ‌ ಬಂದ ನೂರಾರು ಶಿಕ್ಷಕರು, ಜಿಲ್ಲಾಧಿಕಾರಿಗೆ ಬೇಡಿಕೆಗಳನ್ನು ನೀಡಿದರು. ‘ಶಾಲೆಗಳಿಗೆ ರಜೆ ಕೊಟ್ಟು ಪ್ರತಿಭಟನೆಯಲ್ಲಿ ಭಾಗವಹಿಸಿದ್ದೇವೆ. ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಈ ರೀತಿಯ ಹೋರಾಟ ಅನಿವಾರ್ಯವಾಗಿದೆ’ ಎಂದು ಶಿಕ್ಷಕರು ತಿಳಿಸಿದರು.

ತರಗತಿಯನ್ನು ಬಹಿಷ್ಕರಿಸಿ ಬಹುತೇಕ ಶಿಕ್ಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರಿಂದ ಶಾಲೆಗಳು ಮುಚ್ಚಿದ್ದವು.

ಬೇಡಿಕೆಗಳು: ನೂತನ ಪಿಂಚಣಿ ರದ್ದುಪಡಿಸುವುದು, ಇದೀಗ ನಡೆಯುತ್ತಿರುವ ವರ್ಗಾವಣೆ ಪ್ರಕ್ತಿಯೆ ಕೊನೆಗೊಂಡ ತಕ್ಷಣ ಅಕ್ಟೋಬರ್ ನಲ್ಲಿ ಕೇವಲ ಕೋರಿಕೆ ವರ್ಗಾವಣೆ ಮಾಡಬೇಕು, ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಬೇಕು, ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಯಲ್ಲಿರುವ ನ್ಯೂನತೆ ಸರಿಪಡಿಸಬೇಕು, ಆರನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸನ್ನು ಜಾರಿಗೆ ತರಬೇಕು,  ಗ್ರಾನೀಣ ಕೃಪಾಂಕ ಶಿಕ್ಷಕರ ವಜಾ ಆದ ಸೇವೆಯನ್ನು ಸತತ ಸೇವೆ ಎಂದು ಪರಿಗಣಿಸಬೇಕು.

‘ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಸೆ.5ರ ಶಿಕ್ಷಕರ ದಿನ ಬಹಿಷ್ಕರಿಸಿ ವಿಧಾನಸೌಧ ಚಲೋ ನಡೆಸಬೇಕಾಗಬಹುದು’ ಎಂದು ಎಚ್ಚರಿಕೆ ನೀಡಿದರು.

ಬರಹ ಇಷ್ಟವಾಯಿತೆ?

 • 6

  Happy
 • 0

  Amused
 • 1

  Sad
 • 0

  Frustrated
 • 1

  Angry

Comments:

0 comments

Write the first review for this !