ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಅಬಾಧಿತ

ಕಡ್ಡಾಯ ವರ್ಗಾವಣೆ ರದ್ದು ಮಾಡಲು ಸಿ.ಎಂಗೆ ಒತ್ತಾಯ
Last Updated 30 ಜುಲೈ 2019, 20:09 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಇದೀಗ ನಡೆಯುತ್ತಿರುವ ಶಿಕ್ಷಕರ ವರ್ಗಾವಣೆ ಪೈಕಿ ಕಡ್ಡಾಯ ವರ್ಗಾವಣೆ ರದ್ದು
ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೀಡಿದ್ದಾರೆ ಎನ್ನಲಾಗಿದ್ದರೂ, ಅಧಿಕಾರಿಗಳು ಅದನ್ನು ಅಲ್ಲಗಳೆದಿದ್ದಾರೆ.

ಶಿಕ್ಷಣ ಇಲಾಖೆಯ ಅಧಿಕಾರಿಗಳು ಮುಖ್ಯಮಂತ್ರಿ ಅವರನ್ನು ಬಳಿಕ ಭೇಟಿ ಮಾಡಿ, ಇದೀಗ ನಡೆಯುತ್ತಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯ ಬಗ್ಗೆ ವಿವರವಾದ ಮಾಹಿತಿ ನೀಡಿದರು.

ಈ ಬಗ್ಗೆ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು, ಮುಖ್ಯಮಂತ್ರಿ ಅವರಿಗೆ ವರ್ಗಾವಣೆ ಪ್ರಕ್ರಿಯೆಯ ಬಗ್ಗೆ ಮಾಹಿತಿ ನೀಡಿದ್ದೇವೆ. ಹೀಗಾಗಿ ಈ ಮೊದಲು ಪ್ರಕಟಿಸಿದಂತೆಯೇ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ, ಆ.1ರಿಂದ ಮತ್ತೆ ಆರಂಭವಾಗಿ 31ರೊಳಗೆ ಎಲ್ಲವೂ ಕೊನೆಗೊಳ್ಳಲಿದೆ ಎಂದರು.

ಮಂಗಳವಾರ ತಮ್ಮ ಧವಳಗಿರಿ ಮನೆ ಸಮೀಪ ಸೇರಿದ್ದ ಶಿಕ್ಷಕರು ನೀಡಿದ ಮನವಿ ಸ್ವೀಕರಿಸಿ ಮಾತನಾಡಿದ ಅವರು, ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಪ್ರಕ್ರಿಯೆ ಮುಂದುವರಿಯಲಿದೆ ಎಂದರು. ಹಿಂದಿನ ಸರ್ಕಾರ ರೂಪಿಸಿದ್ದ ವರ್ಗಾವಣೆ ನೀತಿ ಅವೈಜ್ಞಾನಿಕವಾಗಿತ್ತು. ‘ಕಡ್ಡಾಯ ವರ್ಗಾವಣೆ‘ಯಂತೂ ಅಸಾಂವಿಧಾನಿಕವಾಗಿದೆ. ಹೀಗಾಗಿಸಮಾನ ಅವಕಾಶ ಕಲ್ಪಿಸುವ ವೈಜ್ಞಾನಿಕ ವರ್ಗಾವಣೆ ನೀತಿ ಜಾರಿಗೊಳಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಶಿಕ್ಷಕರು ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT