ಗುರುವಾರ , ಜುಲೈ 16, 2020
24 °C

2020-21ನೇ ಸಾಲಿನ ಪಿಎಸ್ಐ ಅರ್ಜಿ ಆಹ್ವಾನ ಪ್ರಕ್ರಿಯೆ ತಾತ್ಕಾಲಿಕ ಸ್ಥಗಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: 2020-21ನೇ ಸಾಲಿನ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್ಐ) ಹುದ್ದೆಗಳ ನೇಮಕದ ಅರ್ಜಿ ಆಹ್ವಾನ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಈ ಸಂಬಂಧ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ, ರಾಜ್ಯದ ಕಮಿಷನರ್‌ಗಳು ಹಾಗೂ ಎಸ್ಪಿಗಳಿಗೆ ತುರ್ತು ಸಂದೇಶ ರವಾನಿಸಿದ್ದಾರೆ.

ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಪಿಎಸ್ಐ ಹುದ್ದೆಗಳ ನೇಮಕಕ್ಕೆ ಜೂನ್ 1ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಿ ರಾಜ್ಯ ಸರ್ಕಾರ ಇತ್ತೀಚೆಗೆ ದಿನಪತ್ರಿಕೆಗಳಲ್ಲಿ ಜಾಹೀರಾತು ನೀಡಿತ್ತು. ಈಗ ಅರ್ಜಿಯನ್ನು ಆಡಳಿತಾತ್ಮಕ ಕಾರಣದಿಂದ ಸ್ಥಗಿತಗೊಳಿಸಿರುವುದಾಗಿ ಹೇಳಿದೆ. ಮುಂದಿನ ದಿನಾಂಕವನ್ನು ನಂತರದಲ್ಲಿ ಪ್ರಕಟಿಸುವುದಾಗಿ ತಿಳಿಸಿದೆ.

ಇತ್ತೀಚೆಗಷ್ಟೇ ಪಿಎಸ್ಐ ನೇಮಕಾತಿ ವಯೋಮಿತಿಯನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಈ ಹಿಂದೆ ಹೊರಡಿಸಿದ್ದ ನೇಮಕಾತಿ ಜಾಹೀರಾತಿನಲ್ಲಿ ಹಳೇ ವಯೋಮಿತಿ ಯಥಾಪ್ರಕಾರ ಇತ್ತು. ಇದೀಗ ವಯೋಮಿತಿ ಹೆಚ್ಚಳ ಮಾಡಿ ಪುನಃ ನೇಮಕಾತಿ ಪ್ರಕ್ರಿಯೆ ಆರಂಭಿಸುವ ಸಾಧ್ಯತೆ ಇದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು