ಶುಕ್ರವಾರ, ಮಾರ್ಚ್ 5, 2021
21 °C

ಡಿಸೆಂಬರ್‌ಗೆ ಅಜಿತ್ ಹೊಸ ಸಿನಿಮಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ನೇರ್ಕೊಂಡ ಪಾರ್ವೈ’ ಜೋಡಿ ಅಜಿತ್ ಹಾಗೂ ಎಚ್‌.ವಿನೋದ್ ಮತ್ತೊಂದು ಸಿನಿಮಾದಲ್ಲಿ ಒಂದಾಗಲಿದ್ದಾರೆ.

ಅಜಿತ್ ಅಭಿನಯದ ‘ನೇರ್ಕೊಂಡ ಪಾರ್ವೈ’ ಚಿತ್ರ ದೊಡ್ಡ ಹಿಟ್ ಆಗಿತ್ತು. ಎಚ್‌.ವಿನೋದ್ ನಿರ್ದೇಶನದ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲೂ ಸದ್ದು ಮಾಡಿತ್ತು. ಆದ್ದರಿಂದ ಈ ಜೋಡಿಯ ಮತ್ತೊಂದು ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.

ಹೆಸರಿಡದ ಈ ಸಿನಿಮಾದ ಶೂಟಿಂಗ್‌ ಅಕ್ಟೋಬರ್‌ ಅಂತ್ಯದಲ್ಲಿ ಶುರುವಾಗಲಿದೆ. ವರ್ಷದ ಅಂತ್ಯಕ್ಕೆ ಬಿಡುಗಡೆ ಮಾಡುವ ನಿರೀಕ್ಷೆ ಇದೆ. ಈ ಚಿತ್ರದಲ್ಲಿ ಅಜಿತ್‌ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆ್ಯಕ್ಷನ್‌, ಥ್ರಿಲ್ಲರ್ ಕತೆಯನ್ನು ಒಳಗೊಂಡಿದೆ. ಊಹಿಸಲಾಗದ ಕತೆಯನ್ನು ಹೆಣೆಯಲಾಗಿದೆ ಎಂದು ಚಿತ್ರ ತಂಡ ಹೇಳಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು