ಶನಿವಾರ, ಫೆಬ್ರವರಿ 22, 2020
19 °C

ನೆರೆ ಪರಿಹಾರಕ್ಕಿಂತ ಸಿಎಎ ಪ್ರಚಾರವೇ ಮುಖ್ಯ: ಅಮಿತ್ ಶಾ ವಿರುದ್ಧ ಖರ್ಗೆ ವಾಗ್ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನೆರೆಗೆ ತುತ್ತಾಗಿರುವ ರಾಜ್ಯಕ್ಕೆ ಪರಿಹಾರ ನೀಡುವ ಬದಲು ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಬಗ್ಗೆ ಪ್ರಚಾರ ಮಾಡುವುದೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮುಖ್ಯ ವಾಗಿದೆ’ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಭಾನುವಾರ ಸುದ್ದಿಗಾರರ ಜತೆ ಮಾತನಾಡಿ, ‘ನೆರೆ ಹಾವಳಿಯಿಂದ ಉಂಟಾಗಿರುವ ಸಮಸ್ಯೆ ಪ್ರಸ್ತಾಪಿಸಿಲ್ಲ. ಕಳಸಾ ಬಂಡೂರಿ ಯೋಜನೆ ಬಗ್ಗೆಯೂ ಚಕಾರವೆತ್ತಿಲ್ಲ. ರಾಜ್ಯದ ವಿಚಾರಗಳಿಗೆ ಸ್ಪಂದಿಸಿಲ್ಲ. ರೈತರ ಬಗ್ಗೆ ಸ್ವಲ್ಪವೂ ಕಾಳಜಿ ಇಲ್ಲವಾಗಿದ್ದು, ಕೇವಲ ಸಿಎಎ ಪರ ಪ್ರಚಾರ ಮಾಡಿದ್ದಾರೆ. ಮತ ಬ್ಯಾಂಕ್ ಉಳಿಸಿಕೊಳ್ಳಲು ರಾಜ್ಯಕ್ಕೆ ಬಂದಿದ್ದರು’ ಎಂದು ಆರೋಪಿಸಿದರು.

‘ನೆರೆ ಪರಿಹಾರ, ಕಳಸಾ ಬಂಡೂರಿ ವಿಚಾರಗಳನ್ನು ಮುಖ್ಯಮಂತ್ರಿ ಅವರಾದರೂ ಪ್ರಸ್ತಾಪಿಸಬೇಕಿತ್ತು. ಅದನ್ನೂ ಮಾಡಿಲ್ಲ’ ಎಂದರು.

‘ಸಿಎಎಗೆ ದಲಿತ ವಿರೋಧಿ ಗಳಿಂದಲೇ ವಿರೋಧ ವ್ಯಕ್ತವಾಗುತ್ತಿದೆ’ ಎಂಬ ಶಾ ಹೇಳಿಕೆಗೆ ಪ್ರತಿಕ್ರಿಯಿಸಿ, ‘ಬಿಜೆಪಿಗೆ ದಲಿತರ ಬಗ್ಗೆ ಕಾಳಜಿ ಇಲ್ಲ. ಭಾವನಾತ್ಮಕವಾಗಿ ಪ್ರಚೋದಿಸಲು ಇಂಥ ಹೇಳಿಕೆ ನೀಡುತ್ತಿದ್ದು, ಇವರ ತತ್ವ, ಚಿಂತನೆಗಳಲ್ಲಿ ದಲಿತರ ಬಗ್ಗೆ ಸ್ವಲ್ಪ ವಾದರೂ ಚಿಂತಿಸಿದ್ದರೆ ಇಷ್ಟೊಂದು ಶೋಷಣೆ ಆಗುತ್ತಿರಲಿಲ್ಲ’ ಎಂದರು.

ಹೈಕಮಾಂಡ್ ನಿರ್ಧಾರ: ವಿಧಾನಸಭೆ ಶಾಸಕಾಂಗ ಪಕ್ಷ ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಇಬ್ಬರಿಗೆ ಹಂಚಿಕೆ ಮಾಡುವುದು, ಕೆಪಿಸಿಸಿ ಅಧ್ಯಕ್ಷರ ನೇಮಕದ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದರು. ನಾಲ್ವರು ಕಾರ್ಯಾಧ್ಯಕ್ಷರ ನೇಮಕ್ಕೆ ಸಿದ್ದರಾಮಯ್ಯ ಬೇಡಿಕೆ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಲಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು