ಮಂಗಳವಾರ, ಜನವರಿ 28, 2020
19 °C
3 ದಿನಗಳಿಂದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ: ಕೃತಕ ಉಸಿರಾಟ ಮುಂದುವರಿಕೆ

ಗಂಭೀರ ಸ್ಥಿತಿಯಲ್ಲಿಯೇ ಇದೆ ಪೇಜಾವರ ಶ್ರೀಗಳ ಆರೋಗ್ಯ : ಕೆಎಂಸಿ ವೈದ್ಯರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಉಡುಪಿ: ‘ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳ ಆರೋಗ್ಯ ಸ್ಥಿರವಾಗಿದೆ’ ಎಂದು ಮಣಿಪಾಲದ ಕೆಎಂಸಿ ವೈದ್ಯರು ತಿಳಿಸಿದರು.

ಭಾನುವಾರ ಸಂಜೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ವೈದ್ಯರು, ‘ತೀವ್ರ ನಿಗಾ ಘಟಕದಲ್ಲಿ ಶ್ರೀಗಳಿಗೆ ಚಿಕಿತ್ಸೆ ಮುಂದುವರಿದಿದೆ. ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದ್ದು, ಪರಿಸ್ಥಿತಿ ಇನ್ನೂ ಗಂಭೀರವಾಗಿಯೇ ಇದೆ’ ಎಂದು ಹೇಳಿದರು.

ಶ್ರೀಗಳ ಶ್ವಾಸಕೋಶದಲ್ಲಿ ತುಂಬಿರುವ ಕಫವನ್ನು ಕರಗಿಸಲು ಹಾಗೂ ಶ್ವಾಸಕೋಶ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುವಂತೆ ಮಾಡಲು ಡಾ.ಸುಧಾ ವಿದ್ಯಾಸಾಗರ್‌ ನೇತೃತ್ವದ ತಜ್ಞ ವೈದ್ಯರ ತಂಡ ನಿರಂತರವಾಗಿ ಶ್ರಮಿಸುತ್ತಿದೆ. ಪ್ರತಿರೋಧಕ ಹಾಗೂ ಸಹಾಯಕ ಔಷಧಿಯನ್ನು ನೀಡಲಾಗುತ್ತಿದೆ.

ಶನಿವಾರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡುಬಂದಿತ್ತು. ಚಿಕಿತ್ಸೆಗೆ ನಿಧಾನವಾಗಿ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದರು. ಈಗ ಮತ್ತೆ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಹಾಗೂ ರಾಷ್ಟ್ರ ನಾಯಕರು, ನಾಡಿನ ಪ್ರಮುಖ ಮಠಾಧೀಶರು ಆರೋಗ್ಯ ವಿಚಾರಿಸುತ್ತಿದ್ದಾರೆ. ಮಠ, ದೇವಸ್ಥಾನಗಳಲ್ಲಿ ನಿರಂತರ ಪೂಜೆ, ಪ್ರಾರ್ಥನೆಗಳು ನಡೆಯುತ್ತಿವೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು