ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಲಾಖೆಗಳ ಮಧ್ಯೆ ಸಮನ್ವಯ ಕೊರತೆ: ಬಿ.ಜೆ.ಪುಟ್ಟಸ್ವಾಮಿ

ಸುಸ್ಥಿರ ಅಭಿವೃದ್ಧಿ ಸೂಚ್ಯಂಕದಲ್ಲಿ ರಾಜ್ಯಕ್ಕೆ 40ನೇ ಸ್ಥಾನ
Last Updated 22 ಜನವರಿ 2020, 20:53 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಹಾಗೂ ಲೋಕೋಪಯೋಗಿ ಇಲಾಖೆ ನಡುವೆ ಸಮನ್ವಯತೆ ಕೊರತೆಯಿಂದಾಗಿ ಸುಸ್ಥಿರ ಅಭಿವೃದ್ಧಿ ಸೂಚ್ಯಂಕದಲ್ಲಿ ರಾಜ್ಯ 40ನೇ ಸ್ಥಾನಕ್ಕೆ ಕುಸಿದಿದೆ ಎಂದು ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಬುಧವಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ವಿವಿಧ ಇಲಾಖೆಗಳು ಸಮನ್ವಯತೆ ಸಾಧಿಸಿದರೆ ಅಭಿವೃದ್ಧಿಯಲ್ಲಿ ರಾಜ್ಯ ಮತ್ತಷ್ಟು ಎತ್ತರಕ್ಕೆ ಏರಬಹುದು. ಸಮನ್ವಯ ತರಲು ಪ್ರಯತ್ನಿಸಲಾಗುವುದು’ ಎಂದು ಹೇಳಿದರು.

‘ಸೂಕ್ತ ರಸ್ತೆಗಳಿಲ್ಲದೆ ರಾಜ್ಯದಲ್ಲಿ 4,600 ಹಳ್ಳಿಗಳಲ್ಲಿ ಬಸ್‌ಗಳು ಸಂಚರಿಸುತ್ತಿಲ್ಲ. ಅಂತಹ ಹಳ್ಳಿಗಳಲ್ಲಿ ಸೂಕ್ತ ರಸ್ತೆ ನಿರ್ಮಿಸುವಂತೆ ಸರ್ಕಾರಕ್ಕೆ ಸಲಹೆ ಮಾಡಿದ್ದೇನೆ. ಮೂಲ ಸೌಕರ್ಯ ಕಲ್ಪಿಸಿದ ನಂತರ ಬಸ್ ಸಂಚಾರಕ್ಕೆ ಸೂಚಿಸಲಾಗುವುದು’ ಎಂದರು.

‘ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣ ಶೇ 2ರಿಂದ 4ರಷ್ಟು ಇದೆ. ದೌರ್ಜನ್ಯ ತಡೆಗಟ್ಟಬೇಕಾದರೆ ಶಿಕ್ಷೆ ವಿಧಿಸುವ ಪ್ರಮಾಣದಲ್ಲೂ ಹೆಚ್ಚಳವಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಈ ಬಗ್ಗೆ ಕಾಯ್ದೆಗೆ ಸರ್ಕಾರಕ್ಕೆ ಸಲಹೆ ಮಾಡಿದ್ದೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT