ಮಂಗಳವಾರ, ಫೆಬ್ರವರಿ 25, 2020
19 °C
₹4.80 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದೊಯ್ದ ಕಳ್ಳರು

ನ್ಯಾಯಾಧೀಶರ ಮನೆಯಲ್ಲಿಯೇ ಕಳವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ಸಿ.ಎಂ.ಜೋಶಿ ಅವರ ಮನೆಯಲ್ಲಿಯೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣವನ್ನು ಈಚೆಗೆ ಕಳ್ಳರು ಕಳವು ಮಾಡಿದ್ದಾರೆ.

ಅಜ್ಜರಕಾಡಿನಲ್ಲಿರುವ ಜಿಲ್ಲಾ ನ್ಯಾಯಾಧೀಶರ ಕೃಷ್ಣಾನುಗ್ರಹ ನಿವಾಸಕ್ಕೆ ನ.28ರಂದು ನುಗ್ಗಿದ ಕಳ್ಳರು ಕಪಾಟಿನಲ್ಲಿದ್ದ ₹4.80 ಲಕ್ಷ ಮೌಲ್ಯದ 138 ಗ್ರಾಂ ಚಿನ್ನವನ್ನು ಕದ್ದೊಯ್ದಿದ್ದಾರೆ.

ಚಿನ್ನವನ್ನು ಬ್ಯಾಂಕ್‌ ಲಾಕರ್‌ನಲ್ಲಿಡಲು ಕಪಾಟನ್ನು ತೆರೆದಾಗ ಕಳುವಾಗಿರುವುದು ಗಮನಕ್ಕೆ ಬಂದಿದ್ದು, ನ್ಯಾಯಾಧೀಶರ ಪತ್ನಿ ಶೈಲಜಾ ಜೋಷಿ ಅವರು ಭಾನುವಾರ ಉಡುಪಿ ನಗರಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ನಡೆಸುತ್ತಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು