ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಮಾಡುವ ಪ್ರಶ್ನೆಯೇ ಇಲ್ಲ: ಯಡಿಯೂರಪ್ಪ

Last Updated 26 ಜೂನ್ 2020, 5:55 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಜಾರಿಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಶುಕ್ರವಾರ ಶಾಸಕರ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾಡನಾಡಿದ ಅವರು, ‘ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ಇಂತಹ ಸಂದರ್ಭದಲ್ಲಿ ಮತ್ತೆ ಲಾಕ್‌ಡೌನ್‌ ಮಾಡುವುದು ಸರಿಯಲ್ಲ. ಕೊರೊನಾ ತಡೆಗೆ ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದೆ. ಇದಕ್ಕೆ ಎಲ್ಲರ ಸಹಕಾರವೂ ಅಗತ್ಯವಿದೆ’ ಎಂದು ಹೇಳಿದರು.

ಬೆಂಗಳೂರಿನ ಎಲ್ಲ ಪಕ್ಷಗಳ ಶಾಸಕರು ಕೋವಿಡ್‌ ತಡೆಯಲು ಶ್ರಮಿಸಬೇಕು. ನಗರದಲ್ಲಿ ‌ಕೊರೊನಾ ನಿಯಂತ್ರಿಸುವ ಸಂಬಂಧ ಎಲ್ಲರ ಅಭಿಪ್ರಾಯ‌ ಪಡೆದು ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT