ಗುರುವಾರ , ಡಿಸೆಂಬರ್ 5, 2019
20 °C

ನಾವು ಪಕ್ಷಕ್ಕೆ ಹಿಂದಿರುಗುವ ಪ್ರಶ್ನೆಯೇ ಇಲ್ಲ: ಅತೃಪ್ತರ ಪರ ವಿಶ್ವನಾಥ್ ಗುಡುಗು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನಾವು ವಾಪಾಸ್ ಪಕ್ಷಕ್ಕೆ ಮರಳುವ ಪ್ರಶ್ನೆಯೇ ಇಲ್ಲ’ ಎಂದು ಅತೃಪ್ತ ಶಾಸಕರ ಪರವಾಗಿ ಹೆಚ್.ವಿಶ್ವನಾಥ್ ಗುಡುಗಿದ್ದಾರೆ.

ಮೈತ್ರಿ ಸರ್ಕಾದ ಜೆಡೆಎಸ್‌ ಮತ್ತು ಕಾಂಗ್ರೆಸ್‌ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಮುಂಬೈನಲ್ಲಿ ತಂಗಿದ್ದಾರೆ.

‘ನಮ್ಮನ್ನು ಸಂಪರ್ಕಿಸಿ, ಮನವೊಲಿಸುವ ಧೈರ್ಯ ಯಾವ ನಾಯಕರಿಗೂ ಇಲ್ಲ’ ಎಂದು ವಿಶ್ವಾನಾಥ್‌ ಮೈತ್ರಿ ಸರ್ಕಾರದ ನಡೆಸಿದ ನಾಯಕರಿಗೆ ಶುಕ್ರವಾರ ಸವಾಲು ಹಾಕಿದ್ದಾರೆ.

ಅತೃಪ್ತ ಶಾಸಕರ ರಾಜೀನಾಮೆಯಿಂದಾಗಿ ಮೈತ್ರಿ ಸರ್ಕಾರ ವಿಶ್ವಾಸ ಗಳಿಸುವಲ್ಲಿ ಸಾಧ್ಯವಾಗದೆ, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ತಮ್ಮ ಅಧಿಕಾರ ಕಳೆದುಕೊಂಡರು.

ಸರ್ಕಾರ ರಚನೆ ಉಮೇದಿನಲ್ಲಿರುವ ಬಿಜೆಪಿ ಇಂದು ರಾಜ್ಯಪಾಲರನ್ನು ಭೇಟಿ ಮಾಡಿ, ಸಂಜೆ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಕೋರಿದರು. ರಾಜ್ಯಪಾಲರು ಸಂಜೆ 6ಕ್ಕೆ ಪ್ರಮಾಣ ಸ್ವೀಕರಿಸಲು ಅವಕಾಶ ನೀಡಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು