ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಣಿಜ್ಯೇತರ ವಾಹನಗಳ ಟೋಲ್ ರದ್ದುಪಡಿಸಲು ಚಿಂತನೆ

Last Updated 20 ನವೆಂಬರ್ 2018, 10:35 IST
ಅಕ್ಷರ ಗಾತ್ರ

ಬೆಂಗಳೂರು:‘ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಣಿಜ್ಯೇತರ ವಾಹನಗಳ ಟೋಲ್ ರದ್ದುಪಡಿಸುವ ಚಿಂತನೆಯಿದ್ದು, ಇದಕ್ಕೆ ಸಂಬಂಧಿಸಿದ ಮಸೂದೆ ಸಂಸತ್ತಿನ ಮುಂದಿದೆ’ ಎಂದು ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಈ ಸಂಬಂಧ ಬೆಂಗಳೂರು ವಕೀಲರ ಸಂಘದ ಪರವಾಗಿ ಅಧ್ಯಕ್ಷ ಎ.ಪಿ.ರಂಗನಾಥ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್.ಸುಜಾತ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಪ್ರಾಧಿಕಾರದ ಪರ ವಕೀಲರು, ಈಗಾಗಲೇ ಈ ಸಂಬಂಧ ಕರಡು ಮಸೂದೆ ಸಿದ್ಧವಾಗಿದೆ. ಪರಿಶೀಲನೆಯ ಹಂತದಲ್ಲಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಎನ್‌ಎಚ್ಎಐ ತನ್ನ ನಿಲುವು ಸ್ಪಷ್ಟಪಡಿಸುವಂತೆ ಸೂಚಿಸಿ, ವಿಚಾರಣೆಯನ್ನು ಡಿ. 19ಕ್ಕೆ ಮುಂದೂಡಿದೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹವನ್ನು ಪ್ರಶ್ನಿಸಿ ಈ ಅರ್ಜಿ ಸಲ್ಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT