ಪೊಲೀಸರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ: ಗೃಹ ಸಚಿವ ಎಂ.ಬಿ. ಪಾಟೀಲ

7

ಪೊಲೀಸರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ: ಗೃಹ ಸಚಿವ ಎಂ.ಬಿ. ಪಾಟೀಲ

Published:
Updated:

ಹುಬ್ಬಳ್ಳಿ: ‘ಪೊಲೀಸ್ ಸಿಬ್ಬಂದಿಯ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ವಲಯವಾರು ವಸತಿ ಶಾಲೆ ಆರಂಭಿಲಾಗುವುದು’ ಎಂದು ಗೃಹ ಸಚಿವ ಎಂ.ಬಿ. ಪಾಟೀಲ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಬುಧವಾರ ಮಾತನಾಡಿದ ಅವರು, ‘ಸಿಬ್ಬಂದಿಯ ಜೀವನ ಮಟ್ಟ ಸುಧಾರಿಸಬೇಕು ಎಂಬುದು ನನ್ನ ಉದ್ದೇಶವಾಗಿದೆ. ಆದ್ದರಿಂದ ಅವರ ವೇತನ ಹೆಚ್ಚಳ, ಆರೋಗ್ಯ ಹಾಗೂ ಶಿಕ್ಷಣಕ್ಕೆ ವಿಶೇಷ ಗಮನ ನೀಡಲಾಗುವುದು. ಈಗಾಗಲೇ ಒಳ್ಳೆಯ ಹೆಸರು ಗಳಿಸಿರುವ ಇಲಾಖೆಯನ್ನು ಇನ್ನಷ್ಟು ಬಲಪಡಿಸಲು ನನ್ನದೇ ನೀತಿಯನ್ನು ರೂಪಿಸುತ್ತೇನೆ’ ಎಂದು ಅವರು ಹೇಳಿದರು.

‘ಗೌರಿ ಕೊಲೆ ಪ್ರಕರಣದಲ್ಲಿ ಅತ್ಯುತ್ತಮವಾದ ಕೆಲಸವನ್ನು ಎಸ್‌ಐಟಿ ಮಾಡಿದೆ. ಕಲಬುರ್ಗಿ ಅವರ ಕೊಲೆ ಪ್ರಕರಣದ ತನಿಖೆಯಲ್ಲಿಯೂ ಪ್ರಗತಿಯಾಗಿದ್ದು, ಅಂತಿಮ ಪರಿಣಾಮ ಗೊತ್ತಾಗಲಿದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !