ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಮುಖ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ಚಿಂತನೆ: ಕೋಟ ಶ್ರೀನಿವಾಸ ಪೂಜಾರಿ

Last Updated 16 ಜನವರಿ 2020, 10:12 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರುವ ಬಗ್ಗೆ ಚಿಂತನೆ ನಡೆಸಲಾಗಿದೆ’ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ವಸ್ತ್ರ ಸಂಹಿತೆ ಜಾರಿಗೆ ತರುವಂತೆ ಕೆಲವರು ಮನವಿ ಸಲ್ಲಿಸಿದ್ದಾರೆ. ಇದು ಇನ್ನೂ ಚಿಂತನೆ ಹಂತದಲ್ಲಿದ್ದು, ಯಾವುದೇ ನಿರ್ಧಾರ ಕೈಗೊಂಡಿಲ್ಲ’ ಎಂದು ಸ್ಪಷ್ಟಪಡಿಸಿದರು.

‘ಜನವರಿ 20 ಹಾಗೂ 21ರಂದು ಧಾರ್ಮಿಕ ಪರಿಷತ್ ಸಭೆ ನಡೆಯಲಿದೆ. ಈ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುವುದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT