ಮಂಗಳವಾರ, ಜೂನ್ 2, 2020
27 °C

ಕೆರೆಯಲ್ಲಿ ಮುಳುಗಿ ಮೂವರು ಬಾಲಕರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಕೆರೆಯಲ್ಲಿ ಕಾಲುಜಾರಿ ಬಿದ್ದು ಮೂವರು ಬಾಲಕರು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕು ರೌಡಕುಂದಾ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ವಿರೇಶ ಗದುಗಿನವರ ಮಕ್ಕಳಾದ ರವಿ (11), ನಾಗರಾಜ (10) ಹಾಗೂ ಅಜ್ಜನ ಮನೆಗೆ ಬಂದಿದ್ದ ಯಲಬುರ್ಗಾ ತಾಲ್ಲೂಕಿನ ಮಲಕಸಮುದ್ರ ಗ್ರಾಮದ ಕಾರ್ತಿಕ್‌ ಮಲ್ಲೇಶ (6) ಮೃತಪಟ್ಟಿದ್ದು, ಗ್ರಾಮದಲ್ಲಿ ಪಾಲಕರ ಆಕ್ರಂದನ ಮುಗಿಲುಮುಟ್ಟಿದೆ.

ಮೂವರು ಬಾಲಕರು ಒಂದೇ ಕುಟುಂಬದವರು. ಕುಡಿಯುವ ನೀರು ತರುವುದಕ್ಕಾಗಿ ತಳ್ಳುಗಾಡಿಯಲ್ಲಿ ಕೊಡಗಳನ್ನಿಟ್ಟುಕೊಂಡು ಗ್ರಾಮದ ಪಕ್ಕದಲ್ಲಿರುವ ಕೆರೆಗೆ ಹೋಗಿದ್ದ ವೇಳೆ ಕಾಲು ಜಾರಿದೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು