ಟಿಕೆಟ್‌ ಹಂಚಿಕೆ: ಬಿಎಸ್‌ವೈ ಇಂದು ದೆಹಲಿಗೆ

ಸೋಮವಾರ, ಮಾರ್ಚ್ 25, 2019
31 °C

ಟಿಕೆಟ್‌ ಹಂಚಿಕೆ: ಬಿಎಸ್‌ವೈ ಇಂದು ದೆಹಲಿಗೆ

Published:
Updated:

ಬೆಂಗಳೂರು: ಲೋಕಸಭಾ ಟಿಕೆಟ್‌ ಹಂಚಿಕೆ ಬಗ್ಗೆ ವರಿಷ್ಠರ ಜತೆಗೆ ಚರ್ಚೆ ನಡೆಸಲು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಶುಕ್ರವಾರ ನವದೆಹಲಿಗೆ ತೆರಳಲಿದ್ದಾರೆ.

ಬಿಜೆಪಿ ಅಧ್ಯಕ್ಷ ಅಮಿತ್‌ ಶಾ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಪಾಲ್ಗೊಳ್ಳುವರು. ಈ ವೇಳೆ, ತಾವು ಸಿದ್ಧಪಡಿಸಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ವರಿಷ್ಠರಿಗೆ ಯಡಿಯೂರಪ್ಪ ಸಲ್ಲಿಸಲಿದ್ದಾರೆ.

ಅಮಿತ್‌ ಶಾ ಅವರು ಏಳು ಖಾಸಗಿ ಏಜೆನ್ಸಿಗಳಿಂದ ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಸಮೀಕ್ಷೆ ನಡೆಸಿದ್ದಾರೆ. ಕೇಂದ್ರ ಗುಪ್ತಚರ ಇಲಾಖೆಯ ವರದಿ ಸಹ ಅವರಲ್ಲಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಉಡುಪಿ–ಚಿಕ್ಕಮಗಳೂರು, ಮೈಸೂರು, ಬೆಳಗಾವಿ, ವಿಜಯಪುರ, ಕೊಪ್ಪಳ, ಬಾಗಲಕೋಟೆ ಸಂಸದರ ಸಾಧನೆ ಬಗ್ಗೆ ಪಕ್ಷದ ವಲಯದಲ್ಲೇ ಅಸಮಾಧಾನ ಇದೆ. ಒಂದು ವೇಳೆ ಈ ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಟಿಕೆಟ್‌ ನೀಡಿದರೆ ಗೆಲುವಿನ ಆಸೆ ಕೈಬಿಡಬೇಕು ಎಂದು ಕೆಲವು ನಾಯಕರು ಎಚ್ಚರಿಕೆ ನೀಡಿದ್ದಾರೆ. 3–4 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಬದಲಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !