ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿಕ್ ಟಾಕ್‌ನಲ್ಲಿ ವಿಡಿಯೊ ಹಾಕಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಸಿನಿಮಾದಲ್ಲಿ ಅವಕಾಶ ಸಿಗದಿರುವುದೇ ಆತ್ಮಹತ್ಯೆಗೆ ಕಾರಣ
Last Updated 31 ಆಗಸ್ಟ್ 2019, 16:54 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಿನಿಮಾದಲ್ಲಿ ನಟಿಸಲು ಅವಕಾಶ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಾಕಿನಂತರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಸಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹೊಸಕೋಟೆಯ ಕಂಬಳಿಪುರ ನಿವಾಸಿ ಕಿರಣ್ ಯಾದವ್ (22)ಮೃತಪಟ್ಟ ಯುವಕ. ಈತ ಇಲ್ಲಿನ ಖಾಸಗಿ ಲಾಡ್ಜ್ ಒಂದರಲ್ಲಿ ಕೊಠಡಿ ಬಾಡಿಗೆ ಪಡೆದು ಉಳಿದುಕೊಂಡಿದ್ದ. ಶುಕ್ರವಾರ ಲಾಡ್ಜ್ ಸಿಬ್ಬಂದಿ ಕೊಠಡಿಯ ಬಾಗಿಲು ಬಡಿದರೂ ತೆಗೆಯದಿದ್ದಾಗ ಅನುಮಾನಗೊಂಡ ಸಿಬ್ಬಂದಿ ಕೂಡಲೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರುಕೊಠಡಿಯೊಳಗೆ ಪ್ರವೇಶಿಸಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡಿದೆ.

ಈತ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಟಿಕ್ ಟಾಕ್ ನಲ್ಲಿ ವಿಡಿಯೋ ಅಪ್ ಲೋಡ್ ಮಾಡಿದ್ದು, ಅದರಲ್ಲಿ ಟಿಕ್ ಟಾಕ್ ವೀಕ್ಷಕರೆಲ್ಲರೂ ನನ್ನ ಸೋದರ, ಸೋದರಿಯರಿದ್ದಂತೆ. ಇದು ನನ್ನ ಕೊನೆಯ ವಿಡಿಯೋ, ನನ್ನ ಸಾವಿನ ನಂತರ ನನ್ನ ತಾಯಿಯನ್ನು ನಿಮ್ಮ ತಾಯಿಯಂತೆ ನೋಡಿಕೊಳ್ಳಿ,ನನ್ನ ತಾಯಿ ನಿಮ್ಮ ತಾಯಿ ಇದ್ದಂತೆ ಎಂದು ಹೇಳಿದ್ದಾನೆ.ಆದರೆ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂದು ತಿಳಿಸಿಲ್ಲ.

ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ, ಈತ ಕನ್ನಡ ಸಿನಿಮಾಗಳಲ್ಲಿ ನಟಿಸಬೇಕೆಂದು ಹಲವು ಬಾರಿ ಪ್ರಯತ್ನಪಟ್ಟಿದ್ದ. ಕಳೆದ ಎರಡು ವರ್ಷಗಳಿಂದಲೂ ಈತನ ಪ್ರಯತ್ನ ಮುಂದುವರಿದಿತ್ತು ಎಂದು ಗೊತ್ತಾಗಿದೆ.

2018ರಲ್ಲಿ ಈತ ಕನ್ನಡ ಕಿರುತೆರೆಯೊಂದರ ಪ್ರಸಾರವಾಗುತ್ತಿದ್ದ ರಿಯಾಲಿಟಿ ಶೋನಲ್ಲಿಅವಕಾಶ ಗಿಟ್ಟಸಿಕೊಳ್ಳಲು ಸತತ ಪ್ರಯತ್ನ ನಡೆಸಿದ್ದ. ಕಿರುತೆರೆಯಿಂದ ಸಿನಿಮಾಗಳಲ್ಲಿ ನಟಿಸಲು ಅವಕಾಶ ಸಿಕ್ಕೇ ಸಿಗುತ್ತದೆ ಎಂದುಕೊಂಡಿದ್ದ. ಆದರೆ, ಆ ರಿಯಾಲಿಟಿ ಶೋನಲ್ಲಿ ಅವಕಾಶ ಸಿಗಲಿಲ್ಲ ಎನ್ನಲಾಗಿದೆ.

ಈ ವರ್ಷದ ಆರಂಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಕಿರಣ್ ಯಾದವನನ್ನು ಸಂಪರ್ಕಿಸಿ ನಿನಗೆ ಮುಂಬರುವ ರಿಯಾಲಿಟಿ ಶೋನಲ್ಲಿ ಅವಕಾಶ ಕೊಡಿಸುವುದಾಗಿ ಹೇಳಿದ್ದ. ಅಲ್ಲದೆ, ಇದಕ್ಕಾಗಿ ಕಿರಣ್₹ 1 ಲಕ್ಷವನ್ನು ಅಪರಿಚಿತ ವ್ಯಕ್ತಿಗೆ ನೀಡಿದ್ದ.

ಜುಲೈ ತಿಂಗಳಲ್ಲಿ ಈವ್ಯಕ್ತಿ ಕಿರಣ್ ಯಾದವನಿಗೆ ಕರೆ ಮಾಡಿ ನೀನು ರಿಯಾಲಿಟಿ ಶೋನಲ್ಲಿ ಅವಕಾಶ ಪಡೆದಿರುವೆ ಎಂದು ಹೇಳಿದ್ದ. ಆದರೆ, ಕಳೆದ ವಾರ ಆ ವ್ಯಕ್ತಿಯೇ ಮತ್ತೆ ಕಿರಣ್ ಗೆ ಕರೆ ಮಾಡಿ ನಿನಗೆ ರಿಯಾಲಿಟಿ ಶೋನಲ್ಲಿ ಅವಕಾಶ ಸಿಗುತ್ತಿಲ್ಲ ಎಂದು ಹೇಳಿದ್ದ.

ಕುಟುಂಬದ ಮೂಲಗಳ ಪ್ರಕಾರ, ಕಿರಣ್ ಕಳೆದ ಎರಡು ವರ್ಷಗಳಿಂದ ರಿಯಾಲಿಟಿ ಶೋನಲ್ಲಿ ಭಾಗವಹಿಸಲು ತಯಾರಿ ನಡೆಸಿದ್ದ. ಅಪರಿಚಿತ ವ್ಯಕ್ತಿ ಜುಲೈನಲ್ಲಿ ಅವಕಾಶ ಕೊಟ್ಟೇ ಕೊಡಿಸುತ್ತಾನೆಎಂದು ನಂಬಿದ್ದ. ಆತ ಅವಕಾಶ ಇಲ್ಲ ಎಂದು ಹೇಳಿದ್ದಲ್ಲದೆ,₹ 1 ಲಕ್ಷವನ್ನೂ ಒಂದು ವಾರದ ನಂತರ ಹಿಂದಿರುಗಿಸುವುದಾಗಿ ಹೇಳಿದ್ದಾರೆ ಎಂದಿದ್ದಾನೆ. ಈ ಬೆಳವಣಿಗೆಯಿಂದಕಿರಣ್ ತೀವ್ರ ನೊಂದುಕೊಂಡಿದ್ದ. ಈಗ ಅಪರಿಚಿತ ವ್ಯಕ್ತಿಗಾಗಿ ಹುಡುಕುತ್ತಿದ್ದೇವೆ ಆದರೆ, ಆತ ಸಿಗುತ್ತಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪರಿಚಿತ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT