ಟಿಪ್ಪು ಜಯಂತಿ: ಆಕ್ಷೇಪಣೆ ಸಲ್ಲಿಸಲು ಸೂಚನೆ

7

ಟಿಪ್ಪು ಜಯಂತಿ: ಆಕ್ಷೇಪಣೆ ಸಲ್ಲಿಸಲು ಸೂಚನೆ

Published:
Updated:

ಬೆಂಗಳೂರು: ‘ಸರ್ಕಾರದ ವತಿಯಿಂದ ನಡೆಸಲಾಗುವ ಟಿಪ್ಪು ಜಯಂತಿ ಆಚರಣೆಗೆ ತಡೆ ನೀಡಬೇಕು’ ಎಂದು ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಮೂರು ವಾರಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚಿಸಿದೆ.

ಈ ಸಂಬಂಧ ಕೊಡಗು ಜಿಲ್ಲೆಯ ಹೈಸೊಡ್ಲೂರು ಗ್ರಾಮದ ಕೆ.ಪಿ.ಮಂಜುನಾಥ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್‌ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್‌.ಜಿ.ಪಂಡಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

‘ಆಚರಣೆಗೆ ತಡೆ ನೀಡಬೇಕೆಂಬ ಮಧ್ಯಂತರ ಮನವಿ ಪರಿಗಣಿಸಬೇಕು’ ಎಂಬ ಅರ್ಜಿದಾರರ ಮನವಿಯನ್ನು ಮಾನ್ಯ ಮಾಡಲು ನ್ಯಾಯಪೀಠ ನಿರಾಕರಿಸಿತು.

‘ರಾಜ್ಯದ ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರದ ವತಿಯಿಂದ ಟಿಪ್ಪ ಜಯಂತಿ ಆಚರಿಸಲು ನಿರ್ದೇಶಿಸಿರುವ ಸರ್ಕಾರದ ಸುತ್ತೋಲೆ ರದ್ದುಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.

’2017ರ ಅಕ್ಟೋಬರ್ 24ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರು ಹೊರಡಿಸಿರುವ ಸುತ್ತೋಲೆಯಲ್ಲಿ 30 ಜಿಲ್ಲಾ ಕೇಂದ್ರಗಳಿಗೆ ತಲಾ ₹ 50 ಸಾವಿರ ಮತ್ತು ತಾಲ್ಲೂಕು ಕೇಂದ್ರಗಳಿಗೆ ತಲಾ ₹ 25 ಸಾವಿರ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಲಾಗಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !