ಸೋಮವಾರ, ಡಿಸೆಂಬರ್ 9, 2019
21 °C

ಪಠ್ಯದಲ್ಲಿ ಟಿಪ್ಪು ಅಧ್ಯಾಯಕ್ಕೆ ಕೊಕ್‌: ಉಪಚುನಾವಣೆ ನಂತರವಷ್ಟೇ ವರದಿ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಶಾಲಾ ಪಠ್ಯದಿಂದ ಟಿಪ್ಪು ಸುಲ್ತಾನ್‌ ಅಧ್ಯಾಯವನ್ನು ತೆಗೆದು ಹಾಕುವ ಸಂಬಂಧ ಇತಿಹಾಸ ತಜ್ಞರ ಸಮಿತಿ ಉಪಚುನಾವಣೆಗಿಂತ ಮೊದಲು ವರದಿ ಸಲ್ಲಿಸುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ.

ಇದೇ 7ರಂದು ನಡೆದ ಸಭೆಯಲ್ಲಿ ತಜ್ಞರ ಸಮಿತಿಗೆ 15 ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ ಪರಿಶೀಲನೆಗೆ ಕನಿಷ್ಠ ಒಂದು ತಿಂಗಳು ಬೇಕು ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಚುನಾವಣೆ ಕೊನೆಗೊಳ್ಳುವುದಕ್ಕೆ ಮೊದಲಾಗಿ ಈ ಸೂಕ್ಷ್ಮ ವಿಚಾರದ ಬಗ್ಗೆ ಸರ್ಕಾರ ಯಾವುದೇ ನಿರ್ಧಾರಕ್ಕೆ ಬರಲಾರದು ಎಂದು ಮೂಲಗಳು ತಿಳಿಸಿವೆ.

ಪ್ರತಿಕ್ರಿಯಿಸಿ (+)