ಟಿಪ್ಪುವನ್ನು ಮರೆಯುವ ಕೆಲಸ ಆಗಬೇಕಿತ್ತು: ಸದಾನಂದಗೌಡ

7

ಟಿಪ್ಪುವನ್ನು ಮರೆಯುವ ಕೆಲಸ ಆಗಬೇಕಿತ್ತು: ಸದಾನಂದಗೌಡ

Published:
Updated:

ಮಂಗಳೂರು: ಟಿಪ್ಪು ಜಯಂತಿ ಆಚರಣೆ ಮಾಡುವುದರ ಬದಲು ಟಿಪ್ಪುವನ್ನು ಮರೆಯುವ ಕೆಲಸ ಆಗಬೇಕಿತ್ತು ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. 

ಮಂಗಳೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ವಿರೋಧದ ನಡುವೆ ಕಾಂಗ್ರೆಸ್ ಪಕ್ಷ ಈ ಕಾರ್ಯಕ್ರಮ ನಡೆಸಲು ಮುಂದಾಗಿದೆ. ಮುಂಬರುವ ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಪಕ್ಷ ಇತಿಹಾಸದ ಪುಟ ಸೇರಲಿದೆ' ಎಂದು ಅವರು ಹೇಳಿದ್ದಾರೆ.

ಟಿಪ್ಪು ಜಯಂತಿಗೆ ಬಿಜೆಪಿ ಪಕ್ಷ ಮಾತ್ರವಲ್ಲ ಕ್ರೈಸ್ತರು ಮತ್ತು ಮುಸ್ಲಿಮರು ಕೂಡಾ ವಿರೋಧ ವ್ಯಕ್ತಪಡಿಸಿದ್ದಾರೆ ಎಂದರು.

ಮುಂಬರುವ ಲೋಕಸಭಾ ಚುನಾವಣೆ ಕುರಿತು ಮಾತನಾಡಿದ ಅವರು, 'ಪಕ್ಷ ಮುನ್ನಡೆಸುವ ದೃಷ್ಟಿಯಿಂದ ಸಂಘಟನೆಗೆ ವರಿಷ್ಠರು ನಿರ್ಧರಿಸಿದ್ದಾರೆ. ಉಪಚುನಾಣೆಯಲ್ಲಿ ಪಕ್ಷದ ಕೆಲ ನಾಯಕರ ಹೇಳಿಕೆಗಳಿಂದ ಸ್ವಲ್ಪ ಹಿನ್ನಡೆ ಆಗಿದೆ. ಇದರ ಬಗ್ಗೆ ಅವಲೋಕನ ಮಾಡಿ ಪಕ್ಷ ಸಂಘಟನೆಗೆ ನಾಯಕರು ಮುಂದಾಗಲಿದ್ದಾರೆ ಎಂದು ಹೇಳಿದರು. 

ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ 20ಕ್ಕೂ ಹೆಚ್ಚು ಸ್ಥಾನಗಳಿಸಲಿದೆ. ಮಹಾ ಘಟಬಂದನ್ ಯಶಸ್ವಿ ಆಗಲು ಸಾಧ್ಯವಿಲ್ಲ.ಇದಕ್ಕೆ ಸಮರ್ಥ ನಾಯಕತ್ವದ  ಕೊರತೆ ಇದೆ. ರಾಹುಲ್ ಗಾಂಧಿ ಅವರು ಒಬ್ಬ ಜೋಕರ್ ಇದ್ದ ಹಾಗೆ. ಅವರ ನಾಯಕತ್ವಕ್ಕೆ ಕಾಂಗ್ರೆಸ್ ಪಕ್ಷದಲ್ಲಿಯೇ ವಿರೋಧ ಇದೆ. ಮಹಾಘಟ ಬಂದನ್‌ನಲ್ಲಿರುವ ಪ್ರಾದೇಶಿಕ ಪಕ್ಷಗಳು ಏಡಿ ಇದ್ದ ಹಾಗೆ. ಒಬ್ಬರು ಇನ್ನೊಬ್ಬರನ್ನು ಮೇಲಕ್ಕೆ ಹೋಗಲು ಬಿಡುವುದಿಲ್ಲ' ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 4

  Angry

Comments:

0 comments

Write the first review for this !