ಭಾನುವಾರ, ನವೆಂಬರ್ 17, 2019
24 °C

ಟಿಪ್ಪು ಜಯಂತಿ: ಮೈಸೂರು ಜಿಲ್ಲಾಧಿಕಾರಿಗೆ ನೋಟಿಸ್‌

Published:
Updated:

ಬೆಂಗಳೂರು: ಮೈಸೂರಿನ ಬನ್ನಿಮಂಟಪ ಬಳಿಯ ಬಾಲಭವನದ ಸಭಾಂಗಣವನ್ನು ಟಿಪ್ಪು ಜಯಂತಿ ಆಚರಣೆಗೆ ಬಾಡಿಗೆಗೆ ನೀಡಲು ನಿರಾಕರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಮತ್ತು ಜಿಲ್ಲಾಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಶಾಸಕ ತನ್ವೀರ್ ಸೇಠ್ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌.ಸುನೀಲ್‌ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ಅರ್ಜಿದಾರರ ಮನವಿಯನ್ನು ಮರು ಪರಿಶೀಲಿಸಿ’ ಎಂದು ಮೂಡಾ ಆಯುಕ್ತರು ಮತ್ತು ಜಿಲ್ಲಾಧಿಕಾರಿಗೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಇದೇ13ಕ್ಕೆ ಮುಂದೂಡಲಾಗಿದೆ. ಸೇಠ್ ಅವರು ನ.4ರಂದು ಸಲ್ಲಿಸಿದ್ದ ಅರ್ಜಿಯನ್ನು ಆಯುಕ್ತರು ನ.6ರಂದು ತಿರಸ್ಕರಿಸಿದ್ದರು.

ಪ್ರತಿಕ್ರಿಯಿಸಿ (+)