ಬೆಂಗಳೂರು: ತಳವಾರ, ಪರಿವಾರ ಸಮುದಾಯ ಹಾಗೂ ಕಾರವಾರ, ಬೆಳಗಾವಿ, ಧಾರವಾಡ ಜಿಲ್ಲೆಯಲ್ಲಿರುವ ಸಿದ್ದಿ ಜನಾಂಗವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿದೆ.

‘ಇದರಿಂದಾಗಿ ಇನ್ನು ಮುಂದೆ ಈ ಸಮುದಾಯದವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ ಪಡೆಯಲು ಅವಕಾಶವಾಗಲಿದೆ’ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದರು.

‘ಈ ಜಾತಿಗಳನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಅಧಿಸೂಚನೆ ಹೊರಡಿಸಬೇಕು’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇತ್ತೀಚೆಗೆ ಆಗ್ರಹಿಸಿದ್ದರು.

‘ನಮ್ಮ ಪ್ರಯತ್ನಕ್ಕೆ ಕೊನೆಗೂ ಯಶಸ್ಸು ಸಿಕ್ಕಿದೆ. ಮುಖ್ಯಮಂತ್ರಿಗೆ ಧನ್ಯವಾದಗಳು’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.