ಪ್ರವಾಸಿ ಸ್ಥಳಗಳ ಅಭಿವೃದ್ಧಿಗೆ ನಿರ್ದೇಶನ

7

ಪ್ರವಾಸಿ ಸ್ಥಳಗಳ ಅಭಿವೃದ್ಧಿಗೆ ನಿರ್ದೇಶನ

Published:
Updated:

ಬೆಂಗಳೂರು: ಹೋಟೆಲ್ ಉದ್ಯಮದ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಮುಖ್ಯಮಂತ್ರಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಗುರುವಾರ ನಡೆದ ಕರ್ನಾಟಕ ಪ್ರದೇಶ ಹೋಟೆಲ್ ಮತ್ತು ಉಪಹಾರ ಮಂದಿರಗಳ ಸಂಘದ ಪದಾಧಿಕಾರಿಗಳ ಜತೆಗಿನ ಸಭೆಯಲ್ಲಿ ಅವರು ಮಾತನಾಡಿದರು, 

ಮೈಸೂರು, ಹುಬ್ಬಳ್ಳಿ, ಮಂಗಳೂರು-ಉಡುಪಿ, ಶಿವಮೊಗ್ಗ, ಕೊಡಗು, ಬೆಳಗಾವಿ, ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ಅನೇಕ ಪ್ರವಾಸಿ, ಐತಿಹಾಸಿಕ ಮತ್ತು ಧಾರ್ಮಿಕ ಪ್ರೇಕ್ಷಣೀಯ ಸ್ಥಳಗಳಿವೆ. ಆದ್ಯತೆ ಮೇರೆಗೆ ಇವುಗಳ ಅಭಿವೃದ್ಧಿ ಮಾಡಬೇಕು ಎಂದರು.

ಶಿವಮೊಗ್ಗವನ್ನು ಕೇಂದ್ರವಾಗಿಟ್ಟುಕೊಂಡು ಉತ್ತರಕನ್ನಡ, ಉಡುಪಿ ಜಿಲ್ಲೆಗಳ ಪ್ರವಾಸಿ ತಾಣಗಳಲ್ಲಿ ಉತ್ತಮ ರಸ್ತೆ, ಪ್ರಯಾಣ ಮತ್ತು ವಸತಿಗೆ ಉತ್ತಮ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಗೈಡ್‌ಗಳ ನೇಮಕ ಮಾಡಬೇಕು. ಪ್ರವಾಸಿಗರಿಗೆ ಅಗತ್ಯ ಮಾಹಿತಿ ನೀಡಬೇಕು ಎಂದರು.

ಹೋಟೆಲ್‌ಗಳ ಪರವಾನಗಿ ನವೀಕರಣ ಸರಳಗೊಳಿಸುವ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !