ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಗಾವಣೆ: ಸಿಸಿಬಿ ಅಧಿಕಾರಿಗಳಿಗೆ ವಿನಾಯಿತಿ

Last Updated 8 ನವೆಂಬರ್ 2018, 19:59 IST
ಅಕ್ಷರ ಗಾತ್ರ

ಬೆಂಗಳೂರು: ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಕೇಂದ್ರ ಅಪರಾಧ ವಿಭಾಗದಲ್ಲಿ (ಸಿಸಿಬಿ) ಕರ್ತವ್ಯ ನಿರ್ವಹಿಸುತ್ತಿರುವ ಎಸಿಪಿ/ ಡಿವೈಎಸ್ಪಿ ಹಾಗೂ ಇನ್‌ಸ್ಪೆಕ್ಟರ್‌ಗಳ ವರ್ಗಾವಣೆಗೆ ನಿಗದಿಪಡಿಸಿದ್ದ 5 ವರ್ಷಗಳ ಗರಿಷ್ಠ ಕಾಲಾವಧಿಯಲ್ಲಿ ವಿನಾಯಿತಿ ನೀಡಿ ಗೃಹ ಇಲಾಖೆ ಆದೇಶ ಹೊರಡಿಸಿದೆ.

‘ಕಮಿಷನರೇಟ್ ವ್ಯಾಪ್ತಿಯಲ್ಲಿ 5 ವರ್ಷಗಳಿಗೂ ಹೆಚ್ಚು ಅವಧಿಯಿಂದ ಕೆಲಸ ಮಾಡುತ್ತಿರುವ ಕಾನೂನು ಮತ್ತು ಸುವ್ಯವಸ್ಥೆ, ಸಂಚಾರ ಹಾಗೂ ಸಿಸಿಬಿಯ ಎಸಿಪಿ/ಡಿವೈಎಸ್ಪಿ ಹಾಗೂ ಇನ್‌ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡುವಂತೆ ಈ ಹಿಂದೆ ಆದೇಶ ಹೊರಡಿಸಲಾಗಿತ್ತು. ಆ ಆದೇಶದಲ್ಲಿ ಬದಲಾವಣೆ ಮಾಡಿ ಸಿಸಿಬಿ ಅಧಿಕಾರಿಗಳಿಗೆ ವಿಶೇಷ ವಿನಾಯಿತಿ ನೀಡಲಾಗಿದೆ’ ಎಂದು ಹೊಸ ಆದೇಶದಲ್ಲಿ ಹೇಳಲಾಗಿದೆ.

‘ಸಿಸಿಬಿ ಅಧಿಕಾರಿಗಳು, ತಮ್ಮ ವ್ಯಾಪ್ತಿಯ ಅಪರಾಧ ಹಾಗೂ ರೌಡಿಗಳ ಕುರಿತು ಸಕಲ ಮಾಹಿತಿ ತಿಳಿದುಕೊಂಡಿರುತ್ತಾರೆ. ಸಾಕಷ್ಟು ಅನುಭವ ಹೊಂದಿ, ಅಪರಾಧ ಪತ್ತೆ ಹಾಗೂ ಅಪರಾಧಗಳನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಇವರ ಸೇವೆಯನ್ನು ನಿರ್ದಿಷ್ಟ ಕಾಲಾವಧಿಗೆ ಸೀಮಿತಗೊಳಿಸುವುದು ಸೂಕ್ತವಲ್ಲವೆಂದು ಅಭಿಪ್ರಾಯಪಡಲಾಗಿದೆ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

‘2015ರ ಜೂನ್ 25ರಿಂದ ಸಿಸಿಬಿಯಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳಿಗೆ ಈ ಹೊಸ ಆದೇಶ ಅನ್ವಯವಾಗಲಿದೆ. ಉಳಿದಂತೆ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT