7
ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ನಡುವಿನ ಮನಸ್ತಾಪ

ವರ್ಗಾವಣೆಯೂ ಅಸಮಾಧಾನಕ್ಕೆ ಕಾರಣ?

Published:
Updated:

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಮತ್ತು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಡುವಿನ ಮನಸ್ತಾಪಕ್ಕೆ ಅಧಿಕಾರಿಗಳ ವರ್ಗಾವಣೆ ಕೂಡಾ ಕಾರಣವೇ ಎಂಬ ಪ್ರಶ್ನೆ ವಿಧಾನಸೌಧದ ಅಂಗಳದಲ್ಲಿ ಕೇಳಿಸುತ್ತಿದೆ.

ಮೈತ್ರಿ ಸರ್ಕಾರ ಆಡಳಿತ ಸೂತ್ರ ಹಿಡಿದ ಬಳಿಕ ಸಿದ್ದರಾಮಯ್ಯ ಆಪ್ತರಾಗಿದ್ದ ಕೆಲವು ಐಎಎಸ್ ಅಧಿಕಾರಿಗಳನ್ನು ಸ್ಥಳಾಂತರಿಸಲಾಗಿದೆ. ಹಿರಿಯ ಅಧಿಕಾರಿಗಳ ವರ್ಗಾವಣೆ ವಿಷಯದಲ್ಲಿ ಜೆಡಿಎಸ್ ಏಕಪಕ್ಷೀಯ ತೀರ್ಮಾನ ಕೈಗೊಳ್ಳುತ್ತಿರುವುದು ಅವರ ಸಿಟ್ಟಿಗೆ ಕಾರಣ ಎನ್ನಲಾಗಿದೆ.

ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಆಗಿದ್ದ ಜಗದೀಶ್ ಅವರನ್ನು ಬದಲಿಸಿ ಆ ಸ್ಥಳಕ್ಕೆ ಎಲ್‌.ಸಿ. ನಾಗರಾಜ್‌ ಅವರನ್ನು ನಿಯೋಜಿಸಿರುವುದು ಸಿದ್ದರಾಮಯ್ಯ ಸಿಟ್ಟಿಗೆ ಕಾರಣ ಎಂದೂ ಹೇಳಲಾಗಿದೆ. ಮುಖ್ಯಮಂತ್ರಿಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ‌ ಎಲ್‌.ಕೆ. ಅತೀಕ್‌  ಜಾಗಕ್ಕೆ ಎಂ. ಲಕ್ಷ್ಮೀನಾರಾಯಣ ಅವರನ್ನು ನೇಮಿಸಲಾಗಿದೆ. ಆದರೆ, ಅತೀಕ್‌ ಅವರಿಗೆ ಇನ್ನೂ ಸ್ಥಳ ತೋರಿಸಿಲ್ಲ.

ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತುಷಾರ್ ಗಿರಿನಾಥ್ ಅವರನ್ನು ಮುಕ್ತಗೊಳಿಸಿ ಅವರಿಗೆ ಬೆಂಗಳೂರು ಜಲ ಮಂಡಳಿ ಅಧ್ಯಕ್ಷ ಸ್ಥಾನ ಮಾತ್ರ ವಹಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !