ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳಗಾವಿ, ಮಂಗಳೂರು ಕಮಿಷನರ್ ಸೇರಿ ರಾಜ್ಯದ 13 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಕೊಡಗು, ಚಾಮರಾಜನಗರ, ಚಿಕ್ಕಮಗಳೂರು ಎಸ್ಪಿಗಳೂ ವರ್ಗ
Last Updated 26 ಜೂನ್ 2020, 17:07 IST
ಅಕ್ಷರ ಗಾತ್ರ

ಬೆಂಗಳೂರು: ಬೆಳಗಾವಿ ಹಾಗೂ ಮಂಗಳೂರು ಕಮಿಷನರ್‌ ಸೇರಿದಂತೆ ರಾಜ್ಯದ 13 ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ಶುಕ್ರವಾರ ವರ್ಗಾವಣೆ ಮಾಡಿದೆ.

ಬೆಳಗಾವಿ ಪೊಲೀಸ್ ಕಮಿಷನರ್ ಆಗಿದ್ದ ಬಿ.ಎಸ್.ಲೋಕೇಶ್‌ಕುಮಾರ್ ಅವರನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಡಿಐಜಿಪಿ ಆಗಿ ವರ್ಗಾಯಿಸಲಾಗಿದ್ದು, ಅವರ ಜಾಗಕ್ಕೆ ಕೆ.ತ್ಯಾಗರಾಜನ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಮಂಗಳೂರು ಕಮಿಷನರ್ ಆಗಿದ್ದ ಪಿ.ಎಸ್. ಹರ್ಷ ಅವರನ್ನು ವಾರ್ತಾ ಇಲಾಖೆ ಆಯುಕ್ತರಾಗಿ ವರ್ಗಾಯಿಸಲಾಗಿದ್ದು, ಅವರ ಜಾಗಕ್ಕೆ ವಿಕಾಸ್ ಕುಮಾರ್ ವರ್ಗಾವಣೆಗೊಂಡಿದ್ದಾರೆ. ವಾರ್ತಾ ಇಲಾಖೆ ಆಯುಕ್ತರಾಗಿದ್ದ ಎಸ್.ಎನ್.ಸಿದ್ದರಾಮಪ್ಪ ಅವರನ್ನು ಸಿಐಡಿಯ ಡಿಐಜಿಪಿ ಆಗಿ ವರ್ಗಾಯಿಸಲಾಗಿದೆ.

ಕೊಡಗು ಎಸ್ಪಿ ಸುಮನ್ ಪೆನ್ನೆಕರ್ ಅವರನ್ನು ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ಡಿಸಿಪಿ ಆಗಿ ವರ್ಗಾಯಿಸಲಾಗಿದ್ದು, ಅವರ ಜಾಗಕ್ಕೆ ಕ್ಷಮಾ ಮಿಶ್ರಾ ಅವರನ್ನು ನಿಯೋಜಿಸಲಾಗಿದೆ.

ಚಿಕ್ಕಮಗಳೂರು ಎಸ್ಪಿ ಹರೀಶ್ ಪಾಂಡ್ಯ ಅವರನ್ನು ಗುಪ್ತದಳದ ಎಸ್ಪಿಯಾಗಿ ವರ್ಗಾಯಿಸಲಾಗಿದ್ದು, ಅವರ ಜಾಗಕ್ಕೆ ಎಚ್‌. ಅಕ್ಷಯ್ ಮಚ್ಚಿಂದ್ರ ಅವರು ವರ್ಗಾವಣೆಗೊಂಡಿದ್ದಾರೆ.

ಚಾಮರಾಜನಗರ ಎಸ್ಪಿ ಎಚ್‌.ಡಿ.ಆನಂದ್‌ಕುಮಾರ್ ಅವರನ್ನು ಆಂತರಿಕ ಭದ್ರತಾ ದಳದ ಎಸ್ಪಿಯಾಗಿ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ದಿವ್ಯಾ ಸಾರಾ ಥಾಮಸ್ ಅವರನ್ನು ವರ್ಗಾಯಿಸಲಾಗಿದೆ.

ಪೊಲೀಸ್ ಇಲಾಖೆ ಆಡಳಿತ ವಿಭಾಗದ ಐಜಿಪಿ ಆಗಿದ್ದ ಸೀಮಂತ್‌ಕುಮಾರ್‌ ಸಿಂಗ್ ಅವರನ್ನು ಕೇಂದ್ರ ವಿಭಾಗದ ಐಜಿಪಿಯಾಗಿ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ಕೆ.ವಿ.ಶರತ್‌ಚಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT