ಗುರುವಾರ , ಜೂನ್ 24, 2021
22 °C

ಶಿಕ್ಷಕರ ವರ್ಗಾವಣೆ | ಆದೇಶ ನೀಡಿಲ್ಲ: ಹೈಕೋರ್ಟ್‌ಗೆ ಮಾಹಿತಿ ನೀಡಿದ ರಾಜ್ಯ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಕೌನ್ಸೆಲಿಂಗ್ ನಡೆಸಲಾಗಿದೆ. ಆದರೆ, ಯಾರಿಗೂ ಮೂವ್‌ಮೆಂಟ್‌ ಆರ್ಡರ್‌ (ವರ್ಗಾವಣೆ ಜಾರಿ ಆದೇಶ) ನೀಡಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಈ ಕುರಿತ ಅರ್ಜಿ ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ಟಿ.ಪಿ.ಶ್ರೀನಿವಾಸ್, ‘ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮಾಹಿತಿಯನ್ನು ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಬುಧವಾರ ಸಲ್ಲಿಸಿದರು.

‘ವರ್ಗಾವಣೆಗೆ ನೀತಿಗೆ ಸಂಬಂಧಿಸಿದಂತೆ ಹಿರಿಯ ವಕೀಲ ವಿ. ಲಕ್ಷ್ಮೀನಾರಾಯಣ ಅವರು ಅರ್ಜಿದಾರರ ಪರವಾಗಿ ನೀಡುವ ಸಲಹೆಗಳನ್ನು ಇದೇ 30ರೊಳಗೆ ಪರಿಗಣಿಸಬೇಕು’ ಎಂದು ನ್ಯಾಯಪೀಠ ಈಗಾಗಲೇ ಸರ್ಕಾರಕ್ಕೆ ನಿರ್ದೇಶಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು