ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹ: ಸಾರಿಗೆ ನೌಕರರ ಪ್ರತಿಭಟನೆ

Last Updated 20 ಫೆಬ್ರುವರಿ 2020, 20:35 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಎಲ್ಲ ಸೌಲಭ್ಯಗಳನ್ನು ವಿಸ್ತರಿಸಬೇಕೆಂದು ಆಗ್ರಹಿಸಿ ಸಾರಿಗೆ ನೌಕರರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನನಿರತರನ್ನು ಭೇಟಿಯಾದ ಸಾರಿಗೆ ಸಚಿವ ಲಕ್ಷ್ಮಣ ಸವದಿ, ನೌಕರರ ಬೇಡಿಕೆಯನ್ನು ಸಹಾನುಭೂತಿಯಿಂದ ಪರಿಶೀಲಿಸಿದ ಬಳಿಕ ಮುಖ್ಯಮಂತ್ರಿ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸಾರಿಗೆ ನೌಕರರನ್ನು 2020ರ ಜ.1ರಿಂದ ಜಾರಿಗೆ ಬರುವಂತೆ ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ವಿಧಾನಮಂಡಲ ಬಜೆಟ್‌ ಅಧಿವೇಶನದಲ್ಲೇ ಬೇಡಿಕೆ ಕುರಿತು ಚರ್ಚಿಸಿ, ತೀರ್ಮಾನಿಸಬೇಕು. ಅಗತ್ಯವಿರುವ ಹಣವನ್ನು ಬಜೆಟ್‌ನಲ್ಲಿ ಮೀಸಲಿಡಬೇಕು ಎಂದು ಆಗ್ರಹಿಸಿದರು.

ಶೇಕಡಾ 57ರಷ್ಟಿರುವ ವೇತನ ತಾರತಮ್ಯ ನಿವಾರಿಸಿ, ಪಿಂಚಣಿ ಸೌಲಭ್ಯ ಒದಗಿಸಬೇಕು. ನಿವೃತ್ತ ಸಿಬ್ಬಂದಿಗೂ ಪಿಂಚಣಿ ದೊರೆಯಬೇಕು. ಅಂತರ ನಿಗಮ ವರ್ಗಾವಣೆಯನ್ನು ಮತ್ತೆ ಆರಂಭಿಸಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT