ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ ಇಂದು

Last Updated 19 ಫೆಬ್ರುವರಿ 2020, 21:08 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಈಶಾನ್ಯ ಮತ್ತು ವಾಯವ್ಯ ಸಾರಿಗೆ ಸಂಸ್ಥೆಗಳ ಸಿಬ್ಬಂದಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಗುರುವಾರ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.

‘ಬೆಳಿಗ್ಗೆ 9ರಿಂದ ಮಧ್ಯಾಹ್ನ 3.30ರವರೆಗೆ ಸತ್ಯಾಗ್ರಹ ನಡೆಯಲಿದೆ. ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾಗುವುದಿಲ್ಲ. ವಾರದ ರಜೆಯಲ್ಲಿರುವ ನೌಕರರು ಮತ್ತವರ ಕುಟುಂಬ ಸದಸ್ಯರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಹಿರಿಯ ಸಾಹಿತಿ ಪಾಟೀಲ ಪುಟ್ಟಪ್ಪಪಾಲ್ಗೊಳ್ಳಲಿದ್ದಾರೆ’ ಎಂದು ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರಶೇಖರ್ ‘‍ಪ್ರಜಾವಾಣಿ’ಗೆ ತಿಳಿಸಿದರು.

‘ಬಜೆಟ್‍ನಲ್ಲಿ ನಮ್ಮ ಬೇಡಿಕೆ ಈಡೇರಿಸದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಅವರು ಹೇಳಿದರು.

ಈ ಹಿಂದೆಯೇ ರಜೆ ಪಡೆದವರು ಮತ್ತು ವಾರದ ರಜೆಗಳನ್ನು ಹೊರತುಪಡಿಸಿ ಬೇರೆ ರಜೆಗಳನ್ನು ಮಂಜೂರು ಮಾಡದಂತೆ ನಾಲ್ಕು ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT