ನೇರ ನೇಮಕಾತಿ: ಕಾಯ್ದೆ ತಿದ್ದುಪಡಿಗೆ ಚಿಂತನೆ- ತಮ್ಮಣ್ಣ

7
ದಾವಣಗೆರೆ ಕೆ.ಎಸ್‌.ಆರ್‌.ಟಿ.ಸಿ ಬಸ್‌ನಿಲ್ದಾಣ ವೀಕ್ಷಿಸಿದ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ

ನೇರ ನೇಮಕಾತಿ: ಕಾಯ್ದೆ ತಿದ್ದುಪಡಿಗೆ ಚಿಂತನೆ- ತಮ್ಮಣ್ಣ

Published:
Updated:
ದಾವಣಗೆರೆಯ ಕೆ.ಎಸ್‌.ಆರ್‌.ಟಿ.ಸಿ ಬಸ್‌ನಿಲ್ದಾಣವನ್ನು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಭಾನುವಾರ ವೀಕ್ಷಿಸಿದರು.

ದಾವಣಗೆರೆ: ಸಾರಿಗೆ ಇಲಾಖೆಗೆ ಅಗತ್ಯವಿರುವ ಸಿಬ್ಬಂದಿಯನ್ನು ನೇರವಾಗಿ ನೇಮಕಾತಿ ಮಾಡಿಕೊಳ್ಳಲು ಮೋಟಾರ್ ವಾಹನ ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ ನಡೆಸಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ತಿಳಿಸಿದರು.

ನಗರದಲ್ಲಿ ಕೆ.ಎಸ್‌.ಆರ್‌.ಟಿ.ಸಿ ಬಸ್‌ನಿಲ್ದಾಣ ಹಾಗೂ ಡಿಪೊವನ್ನು ಭಾನುವಾರ ವೀಕ್ಷಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ಸದ್ಯ ಕೆಳ ಹಂತದ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆರ್‌.ಟಿ.ಒ ಹಾಗೂ ಮೋಟಾರ್‌ ವೆಹಿಕಲ್‌ ಇನ್‌ಸ್ಪೆಕ್ಟರ್‌ ಸೇರಿ ಮಂಜೂರಾಗಿರುವ 676 ಅಧಿಕಾರಿಗಳ ಹುದ್ದೆಗಳ ಪೈಕಿ ಸದ್ಯ 260 ಅಧಿಕಾರಿಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆ.ಪಿ.ಎಸ್‌.ಸಿ.ಯಲ್ಲಿನ ತಾಂತ್ರಿಕ ಕಾರಣ ಹಾಗೂ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಸದ್ಯಕ್ಕೆ ಸ್ಥಗಿತಗೊಂಡಿದೆ. ಹೀಗಾಗಿ ಇಲಾಖೆಗೆ ಅಗತ್ಯವಿರುವ ಸಿಬ್ಬಂದಿಯನ್ನು ಕೆ.ಪಿ.ಎಸ್‌.ಸಿ ಬದಲಾಗಿ, ಇಲಾಖೆಯಿಂದಲೇ ನೇರವಾಗಿ ನೇಮಕ ಮಾಡಿಕೊಳ್ಳಲು ತಿದ್ದುಪಡಿ ತರಬೇಕಾಗಿದೆ’ ಎಂದು ಹೇಳಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !