ಗುರುವಾರ , ಜೂಲೈ 2, 2020
28 °C

ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬಂದವರಿಂದ ಕ್ವಾರಂಟೈನ್‌ಗೆ ಹೋಗಲು ನಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹಾರಾಷ್ಟ್ರದಿಂದ ಬೆಂಗಳೂರಿಗೆ ರೈಲಿನಲ್ಲಿ ಗುರುವಾರ ಬೆಳಿಗ್ಗೆ 504 ಪ್ರಯಾಣಿಕರು ಬಂದಿಳಿದಿದ್ದಾರೆ. ಅವರಲ್ಲಿ ಕೆಲವರು ಕ್ವಾರಂಟೈನ್‌ಗೆ ಹೋಗಲು ವಿರೋಧ ವ್ಯಕ್ತಪಡಿಸಿದ್ದರಿಂದ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

ಉದ್ಯಾನ್ ಎಕ್ಸ್‌ಪ್ರೆಸ್‌ನಲ್ಲಿ ಬಂದ ಪ್ರಯಾಣಿಕರನ್ನು ಕ್ವಾರಂಟೈನ್‌ಗೆ ಕಳುಹಿಸಲು ಬಿಬಿಎಂಪಿ ಮತ್ತು ಪೊಲೀಸ್‌ ಸಿಬ್ಬಂದಿ ಸಜ್ಜಾಗಿದ್ದರು. ಬಿಎಂಟಿಸಿ ಬಸ್‌ಗಳೂ ಸಿದ್ಧವಾಗಿದ್ದವು. ಬಸ್ ಹತ್ತಲು ಕೆಲವರು ವಿರೋಧ ವ್ಯಕ್ತಪಡಿಸಿ ಮನೆಯಲ್ಲೇ ಕ್ವಾರಂಟೈನ್‌ನಲ್ಲಿ ಇರುವುದಾಗಿ ಹೇಳಿದರು. ಆದರೆ, ಅದಕ್ಕೆ ಒಪ್ಪದ ಪೊಲೀಸರು ಮತ್ತು ಬಿಬಿಎಂಪಿ ಸಿಬ್ಬಂದಿ ಎಲ್ಲರು ಕ್ವಾರಂಟೈನ್‌ಗೆ ಹೋಗಲೇಬೇಕು ಎಂದು ಮನವರಿಕೆ ಮಾಡಿದರು. ಒಪ್ಪದೆ ಬ್ಯಾಗ್ ಹಿಡಿದು ಹೊರಟವರನ್ನು ಪೊಲೀಸರು ಬಲವಂತವಾಗಿ ಬಸ್ ಹತ್ತಿಸಿದರು.

‘ಬಸ್ ಹತ್ತುವ ಮುನ್ನ ಬಿಬಿಎಂಪಿ ಸಿಬ್ಬಂದಿ ₹200 ಪಡೆಯುತ್ತಿದ್ದಾರೆ. ಮಹಾರಾಷ್ಟ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ನಾವು ತಿನ್ನಲು ಅನ್ನವಿಲ್ಲದ ಸ್ಥಿತಿಯಲ್ಲಿದ್ದೆವು. ಹಣ ಕೇಳಿದರೆ ಎಲ್ಲಿಂದ ತರಬೇಕು? ಬಸ್‌ನಲ್ಲಿ ಕ್ವಾರಂಟೈನ್‌ ಕೇಂದ್ರಕ್ಕೆ ಕರೆದೊಯ್ಯಲು ₹200 ಏಕೆ ಬೇಕು’ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು