ಬೆಂಗಳೂರು: ವಿಧಾನಸೌಧದಲ್ಲಿ 29 ಹಾಗೂ 30ರಂದು ಅಧಿವೇಶನ ನಡೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಈ ಸಂಬಂಧ ನಗರ ಪೊಲೀಸ್ ಕಮಿಷನರ್ ಅಲೋಕ್‌ಕುಮಾರ್ ಆದೇಶ ಹೊರಡಿಸಿದ್ದು, ಜುಲೈ 29ರ ಬೆಳಿಗ್ಗೆ 6 ರಿಂದ ಜುಲೈ 30ರಂದು ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ವಿಧಾನಸೌಧ ಸುತ್ತಮುತ್ತ ಹಾಗೂ ನಗರದಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಅವರ ಅನುಯಾಯಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಆ ರೀತಿಯಾದರೆ ಪರಸ್ಪರ ಘರ್ಷಣೆ ಉಂಟಾಗಲಿದ್ದು, ಸಾರ್ವಜನಿಕರಿಗೆ ತೊಂದರೆ ಆಗಲಿದೆ. ಶಾಂತಿ ಕಾಪಾಡುವ ಉದ್ದೇಶದಿಂದ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಗರದಾದ್ಯಂತ ಇವುಗಳಿಗೆ ನಿಷೇಧ:

* ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ 5 ಅಥವಾ ಅದಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ

* ಮೆರವಣಿಗೆ, ಪ್ರತಿಭಟನೆ, ಧರಣಿ ಮತ್ತು ಸಭೆ ನಡೆಸುವಂತಿಲ್ಲ

* ಶಸ್ತ್ರಾಸ್ತ್ರ, ದೊಣ್ಣೆ, ಕತ್ತಿ, ಈಟಿ, ಗದೆ, ಕಲ್ಲು, ಇಟ್ಟಿಗೆ, ಚಾಕು ಸೇರಿದಂತೆ ಯಾವುದೇ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತಿಲ್ಲ.

* ಯಾವುದೇ ಸ್ಫೋಟಕ ವಸ್ತುಗಳನ್ನು ಸಾಗಿಸುವಂತಿಲ್ಲ. ಇಟ್ಟುಕೊಳ್ಳುವಂತಿಲ್ಲ.

* ವ್ಯಕ್ತಿಗಳ ಅಥವಾ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವಂತಿಲ್ಲ. ಪ್ರಚೋದನಕಾರಿಯಾದ ಬಹಿರಂಗ ಘೋಷಣೆ ಕೂಗುವಂತಿಲ್ಲ. ಸಂಜ್ಞೆ ಮಾಡುವುದು, ಹಾಡುವುದು, ಸಂಗೀತ ನುಡಿಸುವುದು, ಚಿತ್ರಗಳನ್ನು ಬಿಡಿಸುವುದನ್ನು ನಿಷೇಧಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.