ಬುಧವಾರ, ಜುಲೈ 28, 2021
29 °C
ಕಾರ್ಮಿಕ ಸಚಿವರಿಗೆ ಮನವಿ

ಕನ್ನಡಿಗರಿಗೆ ಉದ್ಯೋಗ ನೀಡಿ: ಕನ್ನಡ ಅಭಿವೃದ್ಧಿ ‍ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕೊರೊನಾ ಸೋಂಕಿನ ಕಾರಣದಿಂದ ಹೊರರಾಜ್ಯಗಳ ಕಾರ್ಮಿಕರು ತಮ್ಮ ಊರುಗಳಿಗೆ ವಾಪಸ್ ತೆರಳಿದ ಹಿನ್ನೆಲೆಯಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಒತ್ತಾಯಿಸಿದ್ದಾರೆ.

ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಗುರುವಾರ ಭೇಟಿ ಮಾಡಿದ ನಾಗಾಭರಣ, ‘ಸ್ಥಳೀಯ ನಿರುದ್ಯೋಗಿ ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಆಂಧ್ರಪ್ರದೇಶದ ಸರ್ಕಾರ ಪ್ರತ್ಯೇಕ ಕಾಯ್ದೆ ಜಾರಿಮಾಡಿದೆ. ಅದೇ ರೀತಿ ರಾಜ್ಯದಲ್ಲಿ ಕೂಡ ಸಮಗ್ರ ಕಾಯ್ದೆ ಜಾರಿಮಾಡಬೇಕು. ಖಾಸಗಿ ವಲಯದಲ್ಲಿ ‘ಸಿ’ ಮತ್ತು ‘ಡಿ’ ವರ್ಗದ ಹುದ್ದೆಗಳನ್ನು ಸಂಪೂರ್ಣವಾಗಿ ಸ್ಥಳೀಯ ಕನ್ನಡಿಗರಿಗೆ ಮೀಸಲಿಡಬೇಕು’ ಎಂದು ಮನವಿ ಮಾಡಿದರು. 

‘ಸ್ಥಳೀಯ ಕನ್ನಡಿಗರನ್ನು ನೇಮಕ ಮಾಡಿಕೊಂಡರೆ ಸೂಕ್ತ ಸೌಲಭ್ಯ, ಕನಿಷ್ಠ ವೇತನ ಒದಗಿಸುವ ಜತೆಗೆ ಕಾರ್ಮಿಕ ಕಾನೂನುಗಳನ್ನು ಪಾಲಿಸಬೇಕೆಂಬ ಕಾರಣಕ್ಕೆ ಉದ್ಯಮಿಗಳು ಅನ್ಯರಾಜ್ಯದವರಿಗೆ ಮಣೆ ಹಾಕುತ್ತಿದ್ದಾರೆ. ನೈಪುಣ್ಯ ಹೊಂದಿರುವ ಕನ್ನಡಿಗರನ್ನು ಬಳಸಿಕೊಳ್ಳಬೇಕು’‌ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು