ಭಾನುವಾರ, ಫೆಬ್ರವರಿ 28, 2021
29 °C

ತುಮಕೂರು: ಪಾದರಾಯನಪುರದಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ವೈರಸ್ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ತುಮಕೂರು: ಜಿಲ್ಲೆಯಲ್ಲಿ ಮತ್ತೊಬ್ಬರಿಗೆ ಕೋವಿಡ್–19 ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 8ಕ್ಕೆ ಏರಿದೆ.

ಬೆಂಗಳೂರಿನ ಪಾದರಾಯನಪುರದಲ್ಲಿ ಹೋಟೆಲ್‌ ಕೆಲಸ ಮಾಡಿಕೊಂಡಿದ್ದ 45 ವರ್ಷದ ಪಿ–764 ವ್ಯಕ್ತಿಯನ್ನು ಆತನ ಮಗ ಬೆಂಗಳೂರಿಗೆ ಹೋಗಿ ಮೇ 5 ರಂದು ತುಮಕೂರು ಜಿಲ್ಲೆ ಶಿರಾ ಪಟ್ಟಣಕ್ಕೆ ಕರೆ ತಂದಿದ್ದರು. 
ವಿಚಾರ ತಿಳಿಯುತ್ತಿದ್ದಂತೆ ಆ ವ್ಯಕ್ತಿಯ ಗಂಟಲು ದ್ರವವನ್ನು ಮೇ 5ರಂದೇ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು(ಮೇ 9) ವರದಿ ಬಂದಿದ್ದು, ಸೋಂಕು ದೃಢಪಟ್ಟಿದೆ.

ವ್ಯಕ್ತಿ ತಂಗಿದ್ದ ಶಿರಾದ 100 ಮೀಟರ್‌ ಸ್ಥಳವನ್ನು ನಿರ್ಬಂಧಿತ ವಲಯವನ್ನಾಗಿ ಮಾಡಿದ್ದು, ಈ ಭಾಗವನ್ನು ಹೊರತುಪಡಿಸಿ ಉಳಿದೆಡೆ ವಿವಿಧ ಚಟುವಟಿಕೆಗಳು ನಡೆಯಲಿವೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು