ಸೋಮವಾರ, ಜೂನ್ 14, 2021
26 °C
ಉಪ ಮೇಯರ್ ಆಗಿ ಶಶಿಕಲಾ ಗಂಗಹನುಮಯ್ಯ

ತುಮಕೂರು ಮೇಯರ್ ಚುನಾವಣೆ: ಮೇಯರ್ ಆಗಿ ಫರೀದಾ ಬೇಗಂ ಅವಿರೋಧ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ತುಮಕೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಫರೀದಾ ಬೇಗಂ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಬಿಜೆಪಿ ಅಭ್ಯರ್ಥಿ ವೀಣಾ ಬಿ.ಜಿ. ಅವರು ನಾಮಪತ್ರ ಹಿಂಪಡೆದರು. ಹಾಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದರು. ಈ ಚುನಾವಣೆಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದವು. 

ಮೇಯರ್‌ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಹದಿಮೂರನೇ ವಾರ್ಡ್‌ನ ಫರಿದಾ ಬೇಗಂ ಮತ್ತು ಉಪಮೇಯರ್ ಸ್ಥಾನಕ್ಕೆ ಜೆಡಿಎಸ್‌ನ 33ನೇ ವಾರ್ಡ್‌ನ ಶಶಿಕಲಾ ಗಂಗಹನುಮಯ್ಯ ಅವರು ನಾಮಪತ್ರ ಸಲ್ಲಿಸಿದ್ದರು. 

ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಬೆಂಗಳೂರಿನ ಪ್ರಾದೇಶಿಕ ಆಯುಕ್ತರಾದ ಎಂ.ವಿ.ಪ್ರಸಾದ್ ಅವರು ಚುನಾವಣಾ ಅಧಿಕಾರಿಯಾಗಿ ಬಂದಿದ್ದರು. ಅವರೊಂದಿಗೆ ಹೆಚ್ಚುವರಿ ಆಯುಕ್ತರಾದ ವಿದ್ಯಾಕುಮಾರಿ ಉಪಸ್ಥಿತರಿದ್ದರು.

ಇದನ್ನೂ ಓದಿ... ತುಮಕೂರು ಮಹಾನಗರ ಪಾಲಿಕೆ: ಮೈತ್ರಿ ಮುಂದುವರಿಸಲು ಕೈ– ತೆನೆ ಒಮ್ಮತ


ಫರೀದಾ ಬೇಗಂ, ಶಶಿಕಲಾ ಗಂಗಹನುಮಯ್ಯ, ವೀಣಾ ಬಿ.ಜೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.