ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡೇ ದಿನಕ್ಕೆ ತುಂಗಾ ಜಲಾಶಯ ಭರ್ತಿ

4 ಗೇಟ್‌ಗಳ ಮೂಲಕ 5 ಸಾವಿರ ಕ್ಯುಸೆಕ್‌ ನೀರು ನದಿಗೆ
Last Updated 18 ಜೂನ್ 2020, 20:00 IST
ಅಕ್ಷರ ಗಾತ್ರ

ಶಿವಮೊಗ್ಗ: ಹೊಸನಗರ, ತೀರ್ಥಹಳ್ಳಿ ತಾಲ್ಲೂಕಿನ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದೆ.

ಶೃಂಗೇರಿ, ಆಗುಂಬೆ, ಕೊಪ್ಪ ಭಾಗದಲ್ಲಿ ಮೂರು ದಿನಗಳಿಂದ ಧಾರಾಕಾರ ಮಳೆ ಸುರಿದ ಪರಿಣಾಮ ತುಂಗಾ ಜಲಾಶಯಕ್ಕೆ ಸಾಕಷ್ಟು ನೀರು ಹರಿದುಬಂದಿದೆ. ಜಲಾಶಯದ ನೀರಿನ ಮಟ್ಟ 587.42 ಅಡಿಗೆ (ಗರಿಷ್ಠ ಮಟ್ಟ 588.24 ಅಡಿ– ಸಮುದ್ರಮಟ್ಟದಿಂದ) ತಲುಪಿದೆ. ಎರಡೇ ದಿನಗಳಲ್ಲಿ ಜಲಾಶಯ ಭರ್ತಿಯಾಗುತ್ತಿದ್ದು, ಸುರಕ್ಷತಾ ಕ್ರಮವಾಗಿ ಸೋಮವಾರ ನಾಲ್ಕು ಕ್ರೆಸ್ಟ್‌ಗೇಟ್‌ಗಳನ್ನು ತೆರೆದು 5 ಸಾವಿರ ಕ್ಯುಸೆಕ್‌ ನೀರನ್ನು ತುಂಗಾ ನದಿಗೆ ಹರಿಸಲಾಗುತ್ತಿದೆ.

ಪಶ್ಚಿಮಘಟ್ಟ ವ್ಯಾಪ್ತಿ ಹೊರತು ಪಡಿಸಿದರೆ ಜಿಲ್ಲೆಯ ಉಳಿದ ಭಾಗಗಳಲ್ಲಿ ಮಳೆ ಬಿಡುವು ನೀಡಿತ್ತು. ಭದ್ರಾ ಜಲಾಶಯದ ವ್ಯಾಪ್ತಿಯಲ್ಲೂ ಮಳೆ ಕ್ಷೀಣಿಸಿದೆ. ಕೆಲವೆಡೆ ತುಂತುರು ಮಳೆಯಾಗಿದೆ.

ದಾವಣಗೆರೆ ವರದಿ: ದಾವಣಗೆರೆ ನಗರ, ಉಚ್ಚಂಗಿದುರ್ಗ, ಸಾಸ್ವೇಹಳ್ಳಿ ಹೋಬಳಿಯಲ್ಲಿ ಸೋಮವಾರ ಉತ್ತಮ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT