ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಗಭದ್ರಾ ಜಲಾಶಯಕ್ಕೆ ಹರಿದ ಅಪಾರ ನೀರು; ಮುಳುಗಿದ ಸ್ಮಾರಕಗಳು

Last Updated 19 ಜುಲೈ 2018, 10:30 IST
ಅಕ್ಷರ ಗಾತ್ರ

ಹೊಸಪೇಟೆ: ತುಂಗಭದ್ರಾ ಜಲಾಶಯದಿಂದ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿಸುತ್ತಿರುವ ಕಾರಣ ತಾಲ್ಲೂಕಿನ ಕೆಲ ಸ್ಮಾರಕಗಳು ನೀರಿನಲ್ಲಿ ಮುಳುಗಡೆಯಾಗಿವೆ.

ಹಂಪಿಯ ಪುರಂದರದಾಸರ ಮಂಟಪ, ವಿಜಯನಗರ ಕಾಲದ ಕಾಲು ಸೇತುವೆ ಹಾಗೂ ವಿರೂಪಾಕ್ಷ ದೇಗುಲಕ್ಕೆ‌ ಹೊಂದಿಕೊಂಡಂತೆ ಇರುವ ಪಿತೃಪ್ರಧಾನ ಮಂಟಪಗಳು ನೀರಿನಲ್ಲಿ ಸಂಪೂರ್ಣ ಮುಳುಗಿವೆ.

ನಾಲ್ಕು ವರ್ಷಗಳ ನಂತರ ನದಿಗೆ ನೀರು ಬಿಡುತ್ತಿರುವ ಕಾರಣ ಜೀವಕಳೆ ಬಂದಿದೆ. ವಿವಿಧ ಕಡೆಗಳಿಂದ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ.

ಗುರುವಾರ ಸಂಜೆ ಐವತ್ತು ಸಾವಿರ ಕ್ಯುಸೆಕ್‌ಗೂ ಅಧಿಕ ನೀರು ಹರಿಸಲು ನಿರ್ಧರಿಸಲಾಗಿದ್ದು, ನದಿ ಪಾತ್ರದ ಜನ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ತುಂಗಭದ್ರಾ ಜಲಾಶಯ ಆಡಳಿತ ಮಂಡಳಿ‌ ತಿಳಿಸಿದೆ. ಸದ್ಯ‌ ನದಿಯಲ್ಲಿ ತೆಪ್ಪ, ದೋಣಿ ಸಂಚಾರ ಸ್ಥಗಿತಗೊಂಡಿದೆ. ನದಿ ದಾಟಿ ಹೋಗುವವರು ಅನ್ಯ ಮಾರ್ಗದ ಮೂಲಕ ತೆರಳುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT