ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲಾನಯನ ಪ್ರದೇಶದಲ್ಲಿ ಮಳೆ: ‌‌ತುಂಗಭದ್ರೆ ಒಳಹರಿವು ಹೆಚ್ಚಳ

Last Updated 10 ಏಪ್ರಿಲ್ 2020, 6:37 IST
ಅಕ್ಷರ ಗಾತ್ರ

ಹೊಸಪೇಟೆ: ಎರಡ್ಮೂರು ದಿನಗಳಿಂದ ಜಲಾನಯನ ಪ್ರದೇಶದಲ್ಲಿ ಉತ್ತಮವಾಗಿ ಮಳೆಯಾಗುತ್ತಿರುವುದರಿಂದ ಇಲ್ಲಿನ ತುಂಗಭದ್ರಾ ಜಲಾಶಯಕ್ಕೆ ನೀರು ಹರಿದು ಬರುತ್ತಿದೆ.

ಶುಕ್ರವಾರ 1,504 ಕ್ಯುಸೆಕ್‌ ಒಳಹರಿವು ದಾಖಲಾಗಿದೆ. ಗುರುವಾರ 353 ಕ್ಯುಸೆಕ್‌ ನೀರು ಹರಿದು ಬಂದಿತ್ತು. ಆರು ತಿಂಗಳ ಬಳಿಕ ಜಲಾಶಯಕ್ಕೆ ನೀರು ಹರಿದು ಬರುತ್ತಿದ್ದು, ಇದು ಸಹಜವಾಗಿಯೇ ಅಚ್ಚುಕಟ್ಟು ಪ್ರದೇಶದ ರೈತರಲ್ಲಿ ಸಂತಸಕ್ಕೆ ಕಾರಣವಾಗಿದೆ.

1,633 ಅಡಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,582.60 ಅಡಿ ನೀರಿನ ಸಂಗ್ರಹವಿದೆ. 3,548 ಕ್ಯುಸೆಕ್‌ ನೀರು ಕಾಲುವೆಗಳಿಗೆ ಹರಿಸಲಾಗುತ್ತಿದೆ. ಏಪ್ರಿಲ್‌ ಕೊನೆಯ ವರೆಗೆ ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಬಳಿಕ ನೀರಿನ ಲಭ್ಯತೆ ನೋಡಿಕೊಂಡು ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಈಗಾಗಲೇ ಸರ್ಕಾರ ಘೋಷಿಸಿದೆ.

ಹೆಚ್ಚಿನ ಪ್ರಮಾಣದಲ್ಲಿ ಜಲಾಶಯದಲ್ಲಿ ನೀರಿನ ಸಂಗ್ರಹವಿರುವುದರಿಂದ ಜೂನ್‌ ವರೆಗೆ ಕೊಪ್ಪಳ, ರಾಯಚೂರು, ಬಳ್ಳಾರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆ ಇಲ್ಲ ಎಂದು ಅಣೆಕಟ್ಟೆಯ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

ಜಲಾಶಯ-ತುಂಗಭದ್ರಾ ಜಲಾಶಯದ ಇಂದಿನ ನೀರಿನ ಮಟ್ಟ (10–04–2020)
ಇಂದಿನ ಮಟ್ಟ:1,582.60
ಒಳಹರಿವು: 1,504
ಹೊರಹರಿವು: 3,548 ಕ್ಯುಸೆಕ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT