ವಿಧಾನಸಭೆಗೆ ಕ್ಯಾಮೆರಾ ನಿಷೇಧ ಪ್ರಕರಣ; ‘ಮೂಲಭೂತ ಹಕ್ಕಿಗೆ ಹೇಗೆ ಧಕ್ಕೆ’

ಬೆಂಗಳೂರು: ‘ಖಾಸಗಿ ಟಿ.ವಿ ಚಾನೆಲ್‌ಗಳು ವಿಧಾನಸಭೆ ಕಲಾಪಗಳ ಚಿತ್ರೀಕರಣ ಮಾಡುವುದನ್ನು ನಿಷೇಧಿಸಿ ವಿಧಾನಸಭಾಧ್ಯಕ್ಷರು ಹೊರಡಿಸಿದ ಆದೇಶ ಸಾರ್ವಜನಿಕರ ಮೂಲಭೂತ ಹಕ್ಕಿಗೆ ಹೇಗೆ ಧಕ್ಕೆ ಉಂಟು ಮಾಡುತ್ತದೆ’ ಎಂಬುದನ್ನು ಮನವರಿಕೆ ಮಾಡಿಕೊಡಿ’ ಎಂದು ಹೈಕೋರ್ಟ್ ಅರ್ಜಿದಾರರಿಗೆ ಸೂಚಿಸಿದೆ.
ಈ ಕುರಿತಂತೆ ಎಲ್. ರಮೇಶ್ ನಾಯಕ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಅರ್ಜಿದಾರರ ವಾದ ಆಲಿಸಿದ ನ್ಯಾಯಪೀಠ, ‘ಮೇಲ್ನೋಟಕ್ಕೆ ವಿಧಾನಸಭಾಧ್ಯಕ್ಷರ ಆದೇಶದಲ್ಲಿ ತಪ್ಪೇನೂ ಕಾಣುತ್ತಿಲ್ಲ. ಈ ಹಿಂದೆ ಕಲಾಪಗಳ ನೇರ ಪ್ರಸಾರದ ವ್ಯವಸ್ಥೆ ಇತ್ತೇ? ಮತ್ತು ಆದೇಶದಿಂದ ಸಾರ್ವಜನಿಕರ ಮೂಲಭೂತ ಹಕ್ಕಿನ ಉಲ್ಲಂಘನೆ ಹೇಗೆ ಆಗಲಿದೆ ಎಂಬ ಬಗ್ಗೆ ಮನವರಿಕೆ ಮಾಡಿಕೊಡಿ’ ಎಂದು ಸೂಚಿಸಿ ವಿಚಾರಣೆಯನ್ನು ಡಿ. 2ಕ್ಕೆ ಮುಂದೂಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.