ಮಂಗಳವಾರ, ಜುಲೈ 14, 2020
25 °C
ಇನ್ನುಳಿದ 6ಜನರ ಆರೋಗ್ಯವೂ ಸುಧಾರಣೆಯತ್ತ...

ಬಳ್ಳಾರಿ: ಕೋವಿಡ್-19ರಿಂದ ಗುಣಮುಖರಾದ ಇಬ್ಬರ ಬಿಡುಗಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಳ್ಳಾರಿ: ಜಿಲ್ಲೆಯ ಕೊರೊನಾ ಸೊಂಕಿತ‌ ಮತ್ತಿಬ್ಬರು ಶುಕ್ರವಾರ ಗುಣಮುಖರಾಗಿ ಕೋವಿಡ್ ಜಿಲ್ಲಾಸ್ಪತ್ರೆಯಿಂದ ಹೊರಬಂದರು.

ಜಿಲ್ಲೆಯಲ್ಲಿ ಇದುವರೆಗೆ 13 ಜನ ಸೋಂಕಿತರಾಗಿದ್ದರು. ಅವರಲ್ಲಿ ಈ ಮೊದಲು ಗುಣಮುಖರಾದ ಪಿ-89,ಪಿ-91 ಮತ್ತು ಪಿ-141 ನಂತರ ಪಿ-90 & ಪಿ-151 ಅವರನ್ನು ಬಿಡುಗಡೆ ಮಾಡಲಾಗಿತ್ತು. ಮತ್ತೆ 21 ವರ್ಷ ವಯಸ್ಸಿನ ಪಿ-333 ಮತ್ತು 24 ವರ್ಷದ ಪಿ- 337 ಅವರನ್ನು ವೈದ್ಯ ಸಿಬ್ಬಂದಿ ಮನೆಗೆ ಕಳಿಸಿದರು.

ಇವರಿಬ್ಬರು ಸಹ ಹೊಸಪೇಟೆ ನಗರಕ್ಕೆ ಸೇರಿದವರಾಗಿದ್ದು, ಈ ಮುಂಚೆ ಬಿಡುಗಡೆಯಾದ ಜಿಲ್ಲೆಯ ಮೊದಲ ಸೊಂಕಿತರ ಮಕ್ಕಳು. 

ಮನೆಯತ್ತ ತೆರಳಲು ಸಿದ್ದರಾಗಿ ನಿಂತಿದ್ದವರಿಗೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಹೂಗುಚ್ಛ, ಹಣ್ಣು ನೀಡಿ ಚಪ್ಪಾಳೆ ತಟ್ಟಿ ಅಭಿನಂದಿಸಿದರು. 

ಭಯಭೀತರಾಗಿದ್ದ ಇಬ್ಬರಿಗೂ ಆಪ್ತ ಸಮಾಲೋಚನೆ ಮಾಡಿ ಅವರಲ್ಲಿದ್ದ ಭಯ ಹೋಗಲಾಡಿಸಿ, ಚಿಕಿತ್ಸೆ ನೀಡಿದೆವು ಎಂದರು.

ಇವರನ್ನು 14 ದಿನಗಳವರೆಗೆ ಹೋಮ್ ಕ್ವಾರಂಟೈನ್ ಮಾಡಲಾಗುವುದು. ಜಿಲ್ಲಾ ಕಂಟ್ರೋಲ್ ರೂಂ ಮೂಲಕ 28 ದಿನ ನಿಗಾವಹಿಸಲಾಗುವುದು ಎಂದು ತಿಳಿಸಿದರು.

ನಂತರ ಮಾತನಾಡಿದ ಸೋಂಕು ಮುಕ್ತರು, ' ಆಸ್ಪತ್ರೆಗೆ ದಾಖಲಾಗಿ‌ ಬಂದಾಗಿನಿಂದ ಇಲ್ಲಿಯವರೆಗೆ ಸಿಬ್ಬಂದಿ ಚೆನ್ನಾಗಿ ನೋಡಿಕೊಂಡರು. ಸಮರ್ಪಕ ಚಿಕಿತ್ಸೆ ಕೊಟ್ಟರು. ಸ್ಥೈರ್ಯ ಕಳೆದುಕೊಂಡಿದ್ದ ನಮ್ಮನ್ನು ಮಾನಸಿಕವಾಗಿಯೂ ಸಜ್ಜುಗೊಳಿಸಿದರು. ಉತ್ತಮ ಗುಣಮಟ್ಟದ ಆಹಾರ ಒದಗಿಸಿದರು. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯ ಋಣವನ್ನು‌ ನಾವೆಂದು ಮರೆಯುವುದಿಲ್ಲ' ಎಂದರು.

ಕೋವಿಡ್ ನೋಡಲ್ ಅಧಿಕಾರಿ ಡಾ.ಮಲ್ಲಿಕಾರ್ಜುನ, ಡಾ.ಅನಿಲ್, ಡಾ.ಲಿಂಗರಾಜು, ಡಾ.ವಿಜಯ ಶಂಕರ್, ಡಾ.ಸುನೀಲ್, ಡಾ.ವಿನಯ್, ಡಾ.ಸುಜಾತಾ, ಶುಶ್ರೂಷಾ ಅಧೀಕ್ಷಕಿ ಶಾಂತಾಬಾಯಿ, ಡಾ.ಚಿತ್ರಶೇಖರ್, ಡಾ.ಉಮಾ‌ಮಹೇಶ್ವರಿ‌‌ ಇದ್ದರು

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು