ಗುರುವಾರ , ಡಿಸೆಂಬರ್ 5, 2019
19 °C

ಜೆಡಿಎಸ್‌ನಿಂದ ಇಬ್ಬರ ನಾಮಪತ್ರ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್‌ನಿಂದ ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ಕಾರ್ಯಕರ್ತರಿಗೆ ಗೊಂದಲ ಮೂಡಿಸಿದ್ದಾರೆ.

ಕೆಲ ದಿನಗಳ ಹಿಂದೆ ಜೆಡಿಎಸ್ ವರಿಷ್ಠರು ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ ಅವರು ತಮ್ಮ ಅಧಿಕೃತ ಅಭ್ಯರ್ಥಿ ಎಂದು ಘೋಷಿಸಿದ್ದರು. ಆದರೆ ಸೋಮವಾರ ಬಚ್ಚೇಗೌಡ ಅವರ ಜತೆಗೆ ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರ ಸಂಬಂಧಿ, ಶಿಡ್ಲಘಟ್ಟ ತಾಲ್ಲೂಕಿನ ನಾಗಮಂಗಲದ ರಾಧಾಕೃಷ್ಣ ಅವರು ಕೂಡ ನಾಮಪತ್ರ ಸಲ್ಲಿಸಿದರು.

ಇಬ್ಬರು ಅಭ್ಯರ್ಥಿಗಳು ಒಂದೇ ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು. ಈ ಕುರಿತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಕುಮಾರಸ್ವಾಮಿ ಅವರು, ‘ನಮ್ಮ ಕಾರ್ಯಕರ್ತರು ಯಾವುದೇ ಗೊಂದಲಕ್ಕೆ ಅವಕಾಶ ಕೊಡಬೇಡಿ. ಬಚ್ಚೇಗೌಡ ಅವರ ನೇತೃತ್ವದಲ್ಲಿ ಈ ಚುನಾವಣೆ ನಡೆಯುತ್ತದೆ. ಆದರೆ ಇಬ್ಬರೂ ಈಗ ನಾಮಪತ್ರ ಸಲ್ಲಿಸುತ್ತಾರೆ. ಬಳಿಕ ಅಂತಿಮವಾಗಿ ಯಾರು ಸ್ಪರ್ಧಿಸಬೇಕು ಎಂದು ಕಾರ್ಯಕರ್ತರು, ಮುಖಂಡರ ಸಭೆ ನಡೆಸಿ ನಿರ್ಧರಿಸಲಾಗುತ್ತದೆ’ ಎಂದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು